ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ 46 ಮಹಿಳೆಯರಿಗೆ ಪಶು ಸಂಗೋಪನಾ ಇಲಾಖೆಯ ಮೂಲಕ ನಾಟಿ ಕೋಳಿ ಮರಿಗಳನ್ನು ವಿತರಿಸಲಾಯಿತು.

ಇತ್ತೀಚಿನವರೆಗೂ ಗಿರಿರಾಜ ಕೋಳಿ ಮರಿಗಳನ್ನು ನೀಡಲಾಗುತ್ತಿದ್ದರೂ, ಈ ಬಾರಿ ಜನರ ಬೇಡಿಕೆಗೆ ಅನುಗುಣವಾಗಿ ನಾಟಿ ಕೋಳಿ ಮರಿಗಳನ್ನು ವಿತರಿಸಲಾಗಿದೆ. ಮಹಿಳೆಯರ ಸ್ವ ಉದ್ಯೋಗಕ್ಕೆ ಇದು ಪ್ರೇರಣೆಯಾಗಲಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದರು.

ಪಪಂಗಡದ 40, ಸಾಮಾನ್ಯ 4 ಹಾಗೂ ಪಜಾತಿ ವರ್ಗದ 2 ಮಂದಿ ಸೇರಿದಂತೆ ಒಟ್ಟು 46 ಮಹಿಳೆಯರಿಗೆ 5 ವಾರದ ಕೋಳಿ ಮರಿಗಳನ್ನು ಹಂಚಲಾಯಿತು. “ನಾಟಿ ಕೋಳಿಗೆ ಉತ್ತಮ ಬೇಡಿಕೆ ಇದೆ. ಮನೆಯಲ್ಲಿ ಸಾಕುವ ಮೂಲಕ ಮಹಿಳೆಯರು ಸ್ವ ಉದ್ಯೋಗವನ್ನು ಮಾಡಿಕೊಂಡು ಉತ್ತಮ ಲಾಭ ಗಳಿಸಬಹುದು,” ಎಂದು ಶಾಸಕರು ಹೇಳಿದರು.

ಇದೇ ಸಂದರ್ಭದಲ್ಲಿ ಅವರು ಸರಕಾರದಿಂದ ಬಡವರ ಅಭಿವೃದ್ದಿಗೆ ಹಲವು ಉಚಿತ ಸ್ವಾವಲಂಬಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಬೆಂಬಲ ನೀಡಲಾಗುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತಾಲೂಕು ಪಶುವೈದ್ಯಾಧಿಕಾರಿ ಡಾ. ಧರ್ಮಪಾಲ ಅವರು ಸ್ವಾಗತಿಸಿ, ಸರ್ಕಾರದಿಂದ ಸಿಗುವ ಇತರೆ ಸೌಲಭ್ಯಗಳ ಕುರಿತು ಮಾಹಿತಿಯನ್ನು ನೀಡಿದರು.

Leave a Reply

Your email address will not be published. Required fields are marked *

Join WhatsApp Group
error: Content is protected !!