ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಕಟ್ಟಡದಲ್ಲಿ ಶಾಸಕ ಕಿಶೋರ್ ಕುಮಾರ್ ಪುತ್ತೂರ ಅವರ ಕಚೇರಿ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 22ರಂದು ನೆರವೇರಿತು.

ಕಾರ್ಯಕ್ರಮದ ಆರಂಭದಲ್ಲಿ ಗಣಪತಿ ಹವನ ನಡೆಯಿತು. ಬಳಿಕ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ಸಂಚಾಲಕರಾಗಿರುವ ಹಾಗೂ ಹೊಸದಿಗಂತ ಪತ್ರಿಕೆಯ ಮುಖ್ಯ ಕಾರ್ಯನಿರ್ವಾಹಕರಾದ ಪ್ರಕಾಶ್ ಪಿ.ಎಸ್. ರವರು ದೀಪೋಜ್ವಲನೆ ನೆರವೇರಿಸಿ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ, ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ, ಶಾಸಕರಾದ ವೇದವ್ಯಾಸ ಕಾಮತ್, ಉಮಾನಾಥ ಕೋಟ್ಯಾನ್, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ತಾಲೂಕು ಪ್ರಮುಖರು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಶಾಸಕ ಕಿಶೋರ್ ಕುಮಾರ್ ಪುತ್ತೂರ ಅವರು, “ಸೋಮವಾರದಿಂದ ಮಂಗಳೂರು ಕಚೇರಿಯಲ್ಲಿ ಸಾರ್ವಜನಿಕರಿಗೆ ನೇರ ಸಂಪರ್ಕಕ್ಕೆ ಲಭ್ಯವಿರುತ್ತೇನೆ” ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!