ವಿಟ್ಲ: ಬಂಟ್ವಾಳ ತಾಲೂಕಿನ ನಾರಾಯಣ (42) ಎಂಬಾತ ಅಪ್ರಾಪ್ತ ವಯಸ್ಸಿನ ಬಾಲಿಕೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೆಪ್ಟೆಂಬರ್ 22, 2025 ರಂದು ದೂರುದಾರರು ಮನೆಯಿಂದ ಕೆಲಸಕ್ಕೆ ತೆರಳಿದ್ದ ವೇಳೆ ಮನೆಯಲ್ಲಿ ಇದ್ದ ಪಿರ್ಯಾದಿದಾರರ ಮಗಳನ್ನು ಆರೋಪಿಯು ಕಿರುಕುಳ ನೀಡಿದ ಘಟನೆ ನಡೆದಿದೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಕ್ರ.ಸಂ. 133/2025, ಕಲಂ 7, 8 POCSO Act 2012 ಹಾಗೂ 329(4), 75 BNS-2023 ಅಡಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸರು ಆರೋಪಿಯನ್ನು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!