
ಪುತ್ತೂರು: ಸಂಪ್ಯ ಮಸೀದಿ ಮುಂಭಾಗದಲ್ಲಿ ಬ್ರೇಝಾ ಕಾರು ಪಾದಚಾರಿಗೆ ಡಿಕ್ಕಿ ಹೊಡೆದು ಗಾಯಗೊಳಿಸಿದ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.
ಗಂಭೀರವಾಗಿ ಗಾಯಗೊಂಡ ಅಬ್ದುಲ್ ರಹಿಮಾನ್ (ಪುತ್ತುಚ್ಚ ಸಂಪ್ಯ) ಅವರನ್ನು ಮೊದಲು ಮೆಡ್ ಲ್ಯಾಂಡ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಸೀದಿ ಮುಂಭಾಗದಲ್ಲಿ ಆಕ್ಟಿವಾ ವಾಹನವನ್ನು ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಎದುರಿನಿಂದ ಬಂದ ಬ್ರೆಜ್ವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ.






