
ಪದ್ಮಭೂಷಣ ಪುರಸ್ಕೃತಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ (94) ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಎಸ್.ಎಸ್ ಭೈರಪ್ಪ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ (ಎಸ್.ಎಲ್ ಭೈರಪ್ಪ) ಆಧುನಿಕ ಕನ್ನಡ ಸಾಹಿತ್ಯದ ಕಾದಂಬರಿಕಾರರು ಮತ್ತು ಲೇಖಕರು. ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲೀಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರಾಗಿದ್ದಾರೆ. ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು ಕನ್ನಡದ ಜನಪ್ರಿಯ ಬರಹಗಾರರಾಗಿದ್ದಾರೆ.ಇವರಿಗೆ ಭಾರತ ಸರ್ಕಾರವು ೨೦೨೩ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.
ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಸಂತೇಶಿವರದಲ್ಲಿ ೨೬-೦೭-೧೯೩೪ ರಂದು ಹುಟ್ಟಿದ ಭೈರಪ್ಪನವರು ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಿನಲ್ಲೇ ಪಡೆದರು. ಕಿತ್ತು ತಿನ್ನುವ ಬಡತನ, ಬೇಜವಾಬ್ದಾರಿ ತಂದೆ, ಪ್ಲೇಗ್ ಮಾರಿಯಿಂದ ತತ್ತರಗೊಂಡ ಪರಿಸರದಲ್ಲೂ ಅವರ ಸಣ್ಣ ವಯಸ್ಸಿನಲ್ಲೇ ಅವರ ತಾಯಿಯ ಧೀಮಂತಿಕೆಯನ್ನು ಮೈಗೂಡಿಸಿ ಕೊಂಡರು. ಶಾಲಾ ದಾಖಲೆಗಳ ಪ್ರಕಾರ ಅವರ ಜನ್ಮದಿನ ೨೦-೦೮-೧೯೩೧ ಎಂದು ಅವರು ತಮ್ಮ ಆತ್ಮಕಥೆ ಭಿತ್ತಿಯಲ್ಲಿ ಹೇಳಿಕೊಂಡಿದ್ದಾರೆ.






