ಪುತ್ತೂರು:ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಂತಿಗೋಡು ಗ್ರಾಮದ ಆನಡ್ಕ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ಕಟ್ಟಡ ನಿರ್ಮಾಣಕ್ಕಾಗಿ ನಿವೇಶನ ಮಂಜೂರಾತಿ ನೀಡುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡರಿಗೆ ಶಾಸಕ ಅಶೋಕ್ ರೈ ಮನವಿ ಸಲ್ಲಿಸಿದರು.

ಹಾಲು ಉತ್ಪಾದಕರ ಈ ಮಹಿಳಾ ಸಹಕಾರ ಸಂಘವು ಪುತ್ತೂರು ತಾಲೂಕಿನಲ್ಲಿ ಅತಿ ಹೆಚ್ಚು ಮಹಿಳಾ ಪ್ರತಿನಿಧಿಗಳನ್ನು ಹೊಂದಿದ್ದು, ಹಲವು ವರ್ಷಗಳಿಂದ ಖಾಸಗಿ ಕಟ್ಟಡದಲ್ಲಿ ವ್ಯವಹಾರ ನಡೆಸಿ ಬರುತ್ತಿದೆ. ಸಂಘಕ್ಕೆ ಯಾವುದೇ ಸ್ವಂತ ಕಟ್ಟಡ ಅಥವಾ ಭೂಮಿ ಇಲ್ಲದಿರುವುದು ಕಾರ್ಯನಿರ್ವಹಣೆಗೆ ಅಡಚಣೆಯಾಗುತ್ತಿದೆ.

ಈ ಹಿನ್ನೆಲೆಯಲ್ಲಿ, ಪುತ್ತೂರು ತಾಲೂಕಿನ ನರಿಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಂತಿಗೋಡು ಗ್ರಾಮದ ಸ.ನಂ:249/1ಪಿ ರಲ್ಲಿ 0.15 ಸೆಂಟ್ಸ್ ಜಮೀನು ಸಂಘಕ್ಕೆ ಮಂಜೂರಾತಿ ಮಾಡಿಕೊಡಲು ಕಂದಾಯ ಇಲಾಖೆಗೆ ಸೂಕ್ತ ಆದೇಶ ನೀಡುವಂತೆ ಶಾಸಕರು ಸಚಿವರಿಗೆ ಮನವಿ ಮಾಡಿದರು.

Leave a Reply

Your email address will not be published. Required fields are marked *

Join WhatsApp Group
error: Content is protected !!