ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 27-05-2025ರಂದು ನಡೆದ ಅಬ್ದುಲ್ ರೆಹಮಾನ್ ಕೊಲೆ ಪ್ರಕರಣದಲ್ಲಿ ಬಂಧಿತ ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ-2000 (KCOCA Act) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅ.ಕ್ರಂ ಕಲಂ:103(1) 109(1), 118(1), 118(2), 61(2)(ಎ), 249(ಎ), 238(ಎ) ಜೊತೆಗೆ 3(5) ಬಿ.ಎನ್.ಎಸ್ ಹಾಗೂ ಕಲಂ 25(1)(ಎ) ಭಾರತೀಯ ಶಸ್ತ್ರಾಸ್ತ್ರಗಳ ಕಾಯ್ದೆ 1959ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆದಿದ್ದು, ಆರೋಪಿಗಳಾದ 1. ದೀಪಕ್,2. ಚಿಂತನ್,3. ಪ್ರಥ್ವಿರಾಜ್ ಜೋಗಿ,4. ಸುಮಿತ್ ಬಿ. ಆಚಾರ್ಯ,5. ವಿ.ರವಿರಾಜ ಮೂಲ್ಯ,6. ಅಭಿನ್ ರೈ,7. ತೇಜಾಕ್ಷ,8. ರವಿಸಂಜಯ್ ಜಿ.ಎಸ್.9. ಶಿವಪ್ರಸಾದ್ ತುಂಬೆ,10. ಪ್ರದೀಪ,11. ಶಾಹಿತ್ @ ಸಾಹಿತ್,12. ಸಚಿನ್ @ ಸಚ್ಚು ರೊಟ್ಟಿಗುಡ್ಡೆ,13. ರಂಜಿತ್,ಇವರನ್ನು ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಈ ಪ್ರಕರಣದ ಮತ್ತೊಬ್ಬ ಆರೋಪಿ ಭರತ್ ರಾಜ್ @ ಭರತ್ ಕುಮ್ಡೇಲು (29, ಪುದು ಗ್ರಾಮ) ಇನ್ನೂ ಪರಾರಿಯಾಗಿದ್ದಾನೆ.

ಪೊಲೀಸರ ಪ್ರಕಾರ, ಆರೋಪಿಗಳು ಹಲವು ವರ್ಷಗಳಿಂದ ಕೊಲೆ, ಕೊಲೆ ಯತ್ನ, ಪ್ರಚೋದನಕಾರಿ ಭಾಷಣ ಹಾಗೂ ಇತರೆ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, ಸಮಾಜದಲ್ಲಿ ಅಶಾಂತಿ ಹಾಗೂ ಕೋಮು ಸಂಘರ್ಷಕ್ಕೆ ಕಾರಣರಾಗಿದ್ದಾರೆ.

ಹೀಗಾಗಿ, ಅವರ ವಿರುದ್ಧ ಸಂಘಟಿತ ಅಪರಾಧ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!