
ಉಡುಪಿ: ಖಾಸಗಿ ಬಸ್ ಮಾಲೀಕ ಸೈಫುದ್ದೀನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು ಇದೀಗ ನಾಲ್ಕನೇ ಆರೋಪಿಯಾಗಿರುವ ಮಹಿಳೆಯನ್ನು ಬಂಧಿಸಿದ್ದಾರೆ.
ಬಂಧಿತೆಯನ್ನು ಉಡುಪಿ ಮಿಷನ್ ಕಂಪೌಂಡ್ ನಿವಾಸಿ ರಿಧಾ ಶಭನಾ (27) ಎಂದು ಗುರುತಿಸಲಾಗಿದೆ.
ಸೈಫುದ್ದೀನ್ ಕೊಲೆ ಪ್ರಕರಣದಲ್ಲಿ ಮೊದಲು ಉಡುಪಿ ಮಿಷನ್ ಕಂಪೌಂಡ್ ನಿವಾಸಿ ಮಹಮದ್ ಫೈಸಲ್ ಖಾನ್ (27), ಕರಂಬಳ್ಳಿ ನಿವಾಸಿ ಮೊಹಮ್ಮದ್ ಶರೀಫ್ (37) ಹಾಗೂ ಮಂಗಳೂರು ಕಾಟಿಪಳ್ಳ ನಿವಾಸಿ ಅಬ್ದುಲ್ ಶುಕುರ್ (43) ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಇದೀಗ ಮಹಿಳಾ ಆರೋಪಿ ರಿಧಾ ಶಭನಾ ಬಂಧನದಿಂದಾಗಿ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.






