ಕಡಬ: ಗಣತಿ ಕಾರ್ಯದಲ್ಲಿ ತೊಡಗಿದ್ದ ಶಿಕ್ಷಕಿಯ ಕಾರಿಗೆ ಹಾನಿ ಮಾಡಿರುವ ಘಟನೆ ಅಕ್ಟೋಬರ್ 5ರಂದು ಬೆಳಿಗ್ಗೆ ಕೋಡಿಂಬಾಳ ವಾರ್ಡ್ ಸಂಖ್ಯೆ 13ರಲ್ಲಿ ನಡೆದಿದೆ.

ಕೊಣಾಲು ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ರಮಣಿ ಬಿ ಅವರು ಶಂಕರ ಪಾಜೋವು ಎಂಬವರ ಮನೆಯಲ್ಲಿ ಗಣತಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ, ಆರೋಪಿಯಾದ ಶಂಕರ ಪಾಜೋವು ಅವರು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಕಬ್ಬಿಣದ ರಾಡ್‌ನಿಂದ ಹೊಡೆದು ಹಿಂಬದಿ ಗಾಜನ್ನು ಪುಡಿಗೈದಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಕುರಿತು ರಮಣಿಯವರು ಕಡಬ ಪೊಲೀಸ್ ಠಾಣೆ ಹಾಗೂ ತಹಶೀಲ್ದಾರ್ ಅವರಿಗೆ ದೂರು ಸಲ್ಲಿಸಿದ್ದು, ಈ ಸಂಬಂಧ ಆರೋಪಿ ಶಂಕರ ಪಾಜೋವು ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!