ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಭಕ್ತರ ಬೇಡಿಕೆ ಹಾಗೂ ಅಷ್ಟಮಂಗಲ ಪ್ರಶ್ನಾಚಿಂತನೆಯಲ್ಲಿ ದೈವಜ್ಞರು ನೀಡಿದ ಸೂಚನೆಯಂತೆ ದೀಪಾವಳಿ ಹಬ್ಬದ ಅಂಗವಾಗಿ ಶಿವಲಿಂಗಕ್ಕೆ ಎಳ್ಳೆಣ್ಣೆ ಸಮರ್ಪಣೆ ಮಾಡುವ ಕಾರ್ಯಕ್ಕೆ ಅ.6ರಂದು ಅಧಿಕೃತ ಚಾಲನೆ ದೊರೆಯಿತು.

ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ಪ್ರಥಮ ಎಳ್ಳೆಣ್ಣೆ ಖರೀದಿಸಿ ಶೇಖರಣಾ ಡಬ್ಬಿಗೆ ಎರೆಯುವ ಮೂಲಕ ಸಮರ್ಪಣಾ ಕಾರ್ಯಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಸಮಿತಿ ಸದಸ್ಯರು ಹಾಗೂ ಭಕ್ತರೂ ಸಹ ಎಳ್ಳೆಣ್ಣೆ ಸಮರ್ಪಣೆಯಲ್ಲಿ ಪಾಲ್ಗೊಂಡರು.

ಈ ಕಾರ್ಯಕ್ರಮದಲ್ಲಿ ಮಹಾಬಲ ರೈ ವಳತ್ತಡ್ಕ, ವಿನಯ ಸುವರ್ಣ, ಈಶ್ವರ ಬೆಡೇಕರ್, ಸುಭಾಶ್ ರೈ ಬೆಳ್ಳಿಪ್ಪಾಡಿ, ಕಿಟ್ಟಣ್ಣ ಗೌಡ, ಶಿವರಾಮ ಆಳ್ವ, ಭಾಸ್ಕರ್ ಬಾರ್ಯ, ಗೋವರ್ಧನ್ ಕಾವೇರಿಕಟ್ಟೆ, ಗೋವಿಂದ ಭಟ್‌ ಸೇರಿದಂತೆ ಅನೇಕ ಭಕ್ತರು ಉಪಸ್ಥಿತರಿದ್ದರು.

ವ್ಯವಸ್ಥಾಪನಾ ಸಮಿತಿ ಸದಸ್ಯ ಹಾಗೂ ದೇವಳದ ಪ್ರಧಾನ ಅರ್ಚಕರಾದ ವೇ.ಮೂ. ವಸಂತ ಕೆದಿಲಾಯ ವಿಶೇಷ ಪ್ರಾರ್ಥನೆ ನೆರವೇರಿಸಿದರು.

ದೇವಳದ ಆಡಳಿತ ಸಮಿತಿ ಪೂರ್ವದಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆಯಲ್ಲಿ ಉಲ್ಲೇಖವಾದ ವಿಷಯಗಳನ್ನು ಪುಸ್ತಕ ರೂಪದಲ್ಲಿ ಹೊರತಂದಿದ್ದು, ಅದರಲ್ಲಿ ಸೂಚಿಸಿದಂತೆ ಈ ಬಾರಿ ಎಳ್ಳೆಣ್ಣೆ ಸಮರ್ಪಣೆ ಕಾರ್ಯಕ್ಕೆ ರೂಪು ನೀಡಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!