ಮಂಗಳೂರು:ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ಮೋಟಾರ್ ವಾಹನವನ್ನು ಚಾಲನೆ ಮಾಡಲು ಅವಕಾಶ ನೀಡಿದ ಪ್ರಕರಣದಲ್ಲಿ ಮಾರುತಿ ಕಂಬಾಲ್ ಅವರಿಗೆ ದಂಡ ವಿಧಿಸಲಾಗಿದೆ.

ಮಂಗಳೂರು ಜೆಎಂಎಫ್‌ಸಿ 4 ನ್ಯಾಯಾಲಯದ ಪ್ರಭಾರ ನ್ಯಾಯಾಧೀಶೆ ಶಿಲ್ಪ ಎಸ್. ಬ್ಯಾಡಗಿ ಅವರು ಆರೋಪಿಯ ವಿರುದ್ಧ ನಡೆದ ವಿಚಾರಣೆಯಲ್ಲಿ ತಪ್ಪು ಸಾಬೀತಾಗಿದ್ದು, ಒಟ್ಟು ರೂ. 29,000/- ದಂಡ ಪಾವತಿಸಲು ಆದೇಶ ಹೊರಡಿಸಿದ್ದಾರೆ.

ಅಪ್ರಾಪ್ತ ವಯಸ್ಕರಿಗೆ ವಾಹನ ನೀಡುವುದು ರಸ್ತೆ ಅಪಘಾತಗಳಿಗೆ ಕಾರಣವಾಗುವ ಗಂಭೀರ ತಪ್ಪು ಎಂದು ನ್ಯಾಯಾಲಯ ತೀರ್ಪಿನಲ್ಲಿ ಸೂಚಿಸಿದ್ದು, ಇಂತಹ ಕೃತ್ಯಗಳಿಗೆ ಕಾನೂನು ಪ್ರಕಾರ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!