


ಪುತ್ತೂರು:ಮಾಯ್ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾದ ಆಂಟನಿ ಪತ್ರಾವೋರವರ ಸ್ಮರಣಾರ್ಥವಾಗಿ ಆಯೋಜಿಸಲಾದ ವಾರ್ಷಿಕ ಕ್ರೀಡಾಕೂಟ – 2025 ಅಕ್ಟೋಬರ್ 10 ಮತ್ತು 11ರಂದು ಪುತ್ತೂರಿನ ದರ್ಬೆ ಸಂತ ಫಿಲೋಮಿನಾ ಕಾಲೇಜು ಮೈದಾನದಲ್ಲಿ ಜರಗಲಿದೆ.
ಉದ್ಘಾಟನಾ ಸಮಾರಂಭ
ಅ.10ರಂದು ಬೆಳಿಗ್ಗೆ 9.15ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಮಂಗಳೂರು ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಶನ್ ಉಪಾಧ್ಯಕ್ಷ ಮೊನ್ಸಿಜೊರ್ ಮ್ಯಾಕ್ಸಿಮ್ ಲಾರೆನ್ಸ್ ನೊರೊನ್ಹಾ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕ ಅಶೋಕ್ ಕುಮಾರ್ ರೈ ಹಾಗೂ ಮಂಗಳೂರು ಸಿಟಿ ಕ್ರೈಮ್ ಬ್ರಾಂಚ್ ಪೊಲೀಸ್ ಇನ್‌ಸ್ಪೆಕ್ಟರ್ ರಫೀಕ್ ಕೆ.ಎಮ್. ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸಂಚಾಲಕ ವಂ|ಲಾರೆನ್ಸ್ ಮಸ್ಕರೇನಸ್,ಮಾಯ್ ದೆ ದೇವುಸ್ ಚರ್ಚ್ ಪಾಲನ ಸಮಿತಿಯ ಉಪಾಧ್ಯಕ್ಷ ಜೆರಾಲ್ಡ್ ಡಿಕೋಸ್ಟ, ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜು ಪ್ರಾಂಶುಪಾಲರಾದ ವಂ|ಡಾ|ಆಂಟನಿ ಪ್ರಕಾಶ್ ಮೊಂತೆರೊ, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ವಂ|ಅಶೋಕ್ ರಾಯನ್ ಕ್ರಾಸ್ತಾ, ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲಾ ಮುಖ್ಯಶಿಕ್ಷಕರಾದ ವಂ|ಮ್ಯಾಕ್ಸಿಮ್ ಡಿಸೋಜ ಎಮ್., ಸಂತ ವಿಕ್ಟರನ ಬಾಲಿಕ ಪ್ರೌಢಶಾಲೆಯ ಮುಖ್ಯಶಿಕ್ಷಕಿ ರೊಸಲಿನ್ ಲೋಬೊ, ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕಿ ಸಿಸ್ಟರ್ ಲೋರಾ ಪಾಯಸ್, ಸಂತ ವಿಕ್ಟರನ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕರಾದ ಹ್ಯಾರಿ ಡಿಸೋಜ, ಮಾಯ್ ದೆ ದೇವುಸ್ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಜಾನೆಟ್ ಡಿಸೋಜ, ಸಂತ ಫಿಲೋಮಿನಾ ಮಹಿಳೆಯರ ಹಾಸ್ಟೆಲ್ ವಾರ್ಡನ್ ಸಿಸ್ಟರ್ ಲೂರ್ದು ಮೇರಿ ಮುಖ್ಯ ಅತಿಥಿಗಳಾಗಿ ಹಾಜರಿರಲಿದ್ದಾರೆ.
ಸಮಾರೋಪ ಸಮಾರಂಭ
ಅ.11ರಂದು ಸಂಜೆ 3.30ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಸಂಚಾಲಕ ವಂ|ಲಾರೆನ್ಸ್ ಮಸ್ಕರೇನಸ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಮತ್ತು ಅಬಕಾರಿ ನಿರೀಕ್ಷಕ ಜೋಸ್ಲಿನ್ ಜೆ. ಫೆರ್ನಾಂಡಿಸ್ ಭಾಗವಹಿಸಲಿದ್ದಾರೆ ಎಂದು ಸಂಚಾಲಕರು ತಿಳಿಸಿದ್ದಾರೆ.






