ಪುತ್ತೂರು:‌ ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡ ಘನತ್ಯಾಜ್ಯ ನಿರ್ವಹಣಾ ಘಟಕದ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯ ಘಟನೆ ಬೆಳಕಿಗೆ ಬಂದಿದೆ.

ಈ ಘಟಕದ ಉದ್ಘಾಟನೆ ವೇಳೆ ಸ್ಥಳೀಯ ಶಾಸಕ ಅಶೋಕ್ ರೈ ಅವರನ್ನು ಆಹ್ವಾನಿಸದೆ, ಉದ್ಘಾಟನಾ ಫಲಕದಲ್ಲಿಯೂ ಶಾಸಕರ ಹೆಸರನ್ನು ಉಲ್ಲೇಖಿಸದೆ ಮಾಜಿ ಶಾಸಕರ ಹೆಸರನ್ನು ಹಾಕಿರುವುದು ಶಿಷ್ಟಾಚಾರದ ಗಂಭೀರ ಉಲ್ಲಂಘನೆ ಎಂದು ಪರಿಗಣಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಶಾಸಕ ಅಶೋಕ್ ರೈ ಅವರು ಮೇಲಧಿಕಾರಿಗಳಿಗೆ ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಸುಜಯ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಅಗತ್ಯವಿದ್ದಲ್ಲಿ ಅವರನ್ನು ಅಮಾನತು ಮಾಡುವ ಕ್ರಮ ಕೈಗೊಳ್ಳಬೇಕು ಎಂದು ಶಾಸಕರು ತಿಳಿಸಿದ್ದಾರೆ.

ಈ ಕುರಿತು ವಿವರಣೆ ಕೇಳಿದಾಗ ಪಿಡಿಒ ಅವರು “ನನ್ನ ಗಮನಕ್ಕೆ ಬಾರದೆ ಈ ಘಟನೆ ನಡೆದಿದೆ” ಎಂದು ಸ್ಪಷ್ಟಪಡಿಸಿದ್ದರೂ, ಶಾಸಕರು ಅದನ್ನು ತೃಪ್ತಿದಾಯಕವೆಂದು ಪರಿಗಣಿಸದೆ ಶಿಷ್ಟಾಚಾರ ಉಲ್ಲಂಘನೆಯ ವಿರುದ್ಧ ಗಂಭೀರವಾಗಿ ಪ್ರತಿಕ್ರಿಯಿಸಿದ್ದಾರೆ.

ಶಿಷ್ಟಾಚಾರದ ಪ್ರಕಾರ ಯೋಜನೆಗಳು, ಘಟಕಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳನ್ನು ಸ್ಥಳೀಯ ಶಾಸಕರು ಉದ್ಘಾಟನೆ ಮಾಡಬೇಕಾಗುತ್ತದೆ. ಆದರೆ ಈ ಬಾರಿ ಶಾಸಕರನ್ನು ಕಡೆಗಣಿಸುವ ಮೂಲಕ ನಿಯಮಾತ್ಮಕ ಪ್ರಕ್ರಿಯೆ ಉಲ್ಲಂಘನೆ ನಡೆದಿರುವುದರಿಂದ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ನಿಚ್ಚಲವಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!