
ಪುತ್ತೂರು: ಅ.20ರಂದು ಶಾಸಕ ಅಶೋಕ್ ರೈ ಅವರ ರೈ ಎಸ್ಟೇಟ್ಸ್ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಪ್ರಯುಕ್ತ ನಡೆಯಲಿರುವ ಅಶೋಕ ಜನಮನ–2025 ವಸ್ತ್ರ ವಿತರಣೆ ಕಾರ್ಯಕ್ರಮ ಯಶಸ್ವಿಯಾಗಲೆಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಿತು.
ಈ ಕಾರ್ಯಕ್ರಮಕ್ಕೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಭಾಗವಹಿಸಲಿದ್ದು, ಕಾರ್ಯಕ್ರಮ ಯಾವುದೇ ವಿಘ್ನವಿಲ್ಲದೇ ಯಶಸ್ವಿಯಾಗಿ ನೆರವೇರಲೆಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸರ್ವಧರ್ಮ ಸೌಹಾರ್ದತೆಯ ಸಂಕೇತವಾಗಿ ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ ಸಹ ಪ್ರಾರ್ಥನೆ ನಡೆಸುವ ನಿರ್ಧಾರ ಕೈಗೊಳ್ಳಲಾಗಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಅವರ ನೇತೃತ್ವದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಪುತ್ತೂರು ಮಹಾಲಿಂಗೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರಭಟ್, ಪುಡಾ ಸದಸ್ಯ ನಿಹಾಲ್ ಪಿ. ಶೆಟ್ಟಿ, ಮಹಾಬಲ ರೈ, ಸಂತೋಷ್ ಭಂಡಾರಿ, ಸುಸರ್ಷನ್, ಗಿರೀಶ್ ರೈ ಸಂಟ್ಯಾರ್, ದಾಮೋದರ್ ಮುರ, ರೂಪರೇಖಾ ಆಳ್ವ, ಹರಿಣಾಕ್ಷೆ, ಜಯಂತ ಕೆಂಗುಡೇಲು, ಪೂರ್ಣೇಶ್ ಭಂಡಾರಿ, ರಂಜಿತ್ ಬಂಗೇರ, ರೋಶನ್ ರೈ ಬನ್ನೂರು ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಶಾಸಕ ಅಶೋಕ್ ರೈ ನೇತೃತ್ವದಲ್ಲಿ ನಡೆಯಲಿರುವ ಅಶೋಕ ಜನಮನ 2025 ಕಾರ್ಯಕ್ರಮ ಯಶಸ್ವಿಗಾಗಿ ಪಕ್ಷದ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವರಲ್ಲಿ ವಿಶೇಷ ಪ್ರಾರ್ಥನೆ ನೆರವೇರಿತು. ಎಲ್ಲವೂ ನಿರ್ವಿಘ್ನವಾಗಿ ನಡೆದು ಕಾರ್ಯಕ್ರಮ ಭವ್ಯವಾಗಿ ಯಶಸ್ವಿಯಾಗಲೆಂದು ದೇವರಲ್ಲಿ ಪ್ರಾರ್ಥಿಸಲಾಯಿತು. ಮುಂದಿನ ದಿನಗಳಲ್ಲಿ ಎಲ್ಲಾ ಧರ್ಮದ ಧಾರ್ಮಿಕ ಕೇಂದ್ರಗಳಲ್ಲಿಯೂ ಪಕ್ಷದ ವತಿಯಿಂದ ವಿಶೇಷ ಪ್ರಾರ್ಥನೆ ನಡೆಯಲಿದೆ.






