
ಪುತ್ತೂರು: ಕೆದಂಬಾಡಿ ಕೆಯ್ಯರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬೊಳಿಕ್ಕಲ ಶಶಿಧರ ರಾವ್ (73) ರವರು ಅಲ್ಪಕಾಲದ ಅಸೌಖ್ಯದಿಂದ ಅಕ್ಟೋಬರ್ 13 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಇವರು ಕಳೆದ 21 ವರ್ಷಗಳಿಂದ ಕೆದಂಬಾಡಿ ಕೆಯ್ಯರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು, ಸಹಕಾರ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದ್ದರು. ಅಲ್ಲದೆ ಕೆಯ್ಯರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮಾಜಿ ಆಡಳಿತ ಮುಕ್ತಸರರೂ ಆಗಿದ್ದರು.
ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದ ಶಶಿಧರ ರಾವ್ ಅವರು ಅನೇಕ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದರು. ಮೃತರು ಪತ್ನಿ ಯಶೋಧ, ಪುತ್ರಿ ಶ್ರೀನಿಧಿ, ಅಳಿಯ ನಾಗಾನಂದ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.









