
ಕಾರ್ಕಳ ಕ್ಷೇತ್ರದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಅವರ ಪುತ್ರ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಬಾರ್ಕೂರು ಗ್ರಾಮದ ಬಳಿ ಘಟನೆ ನಡೆದಿದೆ. ಸುದೀಪ್ ಭಂಡಾರಿ ಆತ್ಮಹತ್ಯೆ ಮಾಡಿಕೊಂಡವರು ಎನ್ನಲಾಗಿದೆ.
ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೆಬ್ರಿ ನಿವಾಸಿಯಾಗಿದ್ದ ಸುದೀಪ್ ಭಂಡಾರಿ ಆರ್ಥಿಕ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಬ್ರಹ್ಮಾವರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಎರಡು ಬಾರಿ ಶಾಸಕರಾಗಿದ್ರು ಗೋಪಾಲ್ ಭಂಡಾರಿ
ಸುದೀಪ್ ತಂದೆ ಹೆಚ್.ಗೋಪಾಲ್ ಭಂಡಾರಿ ಅವರು 1999ರಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು. ನಂತರ 2008ರಲ್ಲಿಯೂ ಎರಡನೇ ಬಾರಿ ಶಾಸಕರಾಗಿದ್ದಾರೆ. ಹೆಚ್.ಗೋಪಾಲ್ ಭಂಡಾರಿ ಅವರು ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದರು. ಗೋಪಾಲ್ ಭಂಡಾರಿ ಅವರಿಗಿಂತ ಮುಂಚೆ ಈ ಕ್ಷೇತ್ರವನ್ನು ವೀರಪ್ಪ ಮೊಯ್ಲಿ ಪ್ರತಿನಿಧಿಸುತ್ತಿದ್ದರು. ಸದ್ಯ ಬಿಜೆಪಿಯ ಸುನಿಲ್ ಕುಮಾರ್ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ.









