ಪುತ್ತೂರು, ಅ.14: ಸುಳ್ಯ ಮೂಲದ ಯುವಕನೊಬ್ಬ ಮಾರಿಷಸ್‌ನಲ್ಲಿ ಜಲಪಾತ ವೀಕ್ಷಣೆಗೆ ತೆರಳಿದ ವೇಳೆ ಕಾಲು ಜಾರಿ ಬಿದ್ದು ಮೃತಪಟ್ಟ ದುರ್ಘಟನೆ ಸಂಭವಿಸಿದೆ.

ಮೃತನನ್ನು ಸುಬ್ರಹ್ಮಣ್ಯ ಸಮೀಪದ ನಡುಗಲ್ಲು ಕಲ್ಲಾಜೆ ನಿವಾಸಿ ಜಯಲಕ್ಷ್ಮಿ ಅವರ ಪುತ್ರ ನಂದನ್ ಎಸ್. ಭಟ್ (25) ಎಂದು ಗುರುತಿಸಲಾಗಿದೆ.

ನಂದನ್ ಅವರು ವಿದ್ಯಾರ್ಥಿ ವೀಸಾದಲ್ಲಿ ಮಾರಿಷಸ್‌ನಲ್ಲಿ ಡಿಪ್ಲೊಮಾ ಇನ್ ಹಾಸ್ಪಿಟಾಲಿಟಿ ಆಂಡ್ ಟೂರಿಸಂ ವ್ಯಾಸಂಗ ಮಾಡುತ್ತಿದ್ದು, ಅ.13 ರಂದು ಸ್ನೇಹಿತರೊಂದಿಗೆ ಜಲಪಾತ ವೀಕ್ಷಣೆಗೆ ತೆರಳಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಅವರು ಬಿದ್ದ ನಂತರ ಸ್ಥಳೀಯ ಪೊಲೀಸರು ಶೋಧ ಕಾರ್ಯ ನಡೆಸಿ ಮೃತದೇಹವನ್ನು ಪತ್ತೆಹಚ್ಚಿದ್ದು, ಪ್ರಸ್ತುತ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಮೃತದೇಹವನ್ನು ಭಾರತಕ್ಕೆ ತರಲು ನಂದನ್ ಅವರ ತಾಯಿಯ ತಮ್ಮ ಕಾರ್ಕಳದ ಸತ್ಯನಾರಾಯಣ ಭಟ್ ಅವರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಿದ್ದು, ಪ್ರತಿಕ್ರಿಯಿಸಿದ ಕೋಟ ಶ್ರೀನಿವಾಸ ಪೂಜಾರಿ ಅವರು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ವಿಷಯ ತಿಳಿಸಿ ಅಗತ್ಯ ಕ್ರಮಕ್ಕೆ ವಿನಂತಿಸಿದ್ದಾರೆ.

ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಕೂಡ ಕೇಂದ್ರ ಸರ್ಕಾರದ ಗಮನಕ್ಕೆ ವಿಷಯವನ್ನು ತರಲೆಂದು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!