ರಾಜ್ಯದ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ (Caste census) ಭಾಗಿಯಾಗಿದ್ದ ವೇಳೆ ಕೋಲಾರದಲ್ಲಿ (Kolar) ನಾಪತ್ತೆಯಾಗಿದ್ದ ಶಾಲಾ ಶಿಕ್ಷಕಿ (School teacher) ಅಖ್ತರ್ ಶವವಾಗಿ ಪತ್ತೆಯಾಗಿದ್ದಾರೆ.

ಆದ್ರೆ ಸಾವಿನ ಹಿಂದಿನ ನಿಖರ ಕಾರಣ ಮತ್ತು ಈ ಘಟನೆ ಹೇಗೆ ಸಂಭವಿಸಿದೆ ಎಂಬುದು ಇನ್ನಷ್ಟೇ ತಿಳಿಯಬೇಕಿದೆ.

ಶಿಕ್ಷಕಿ ಅಖ್ತರ್ ಅವರು ಕೋಲಾರ ಜಿಲ್ಲೆಯ ಕೆ.ಬಿ ಹೊಸಹಳ್ಳಿ ಸರ್ಕಾರಿ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಹೀಗಾಗಿ ಇವರನ್ನು ಸಮೀಕ್ಷೆಗೆ ಗಣತಿದಾರರನ್ನಾಗಿ ನೇಮಕ ಮಾಡಲಾಗಿತ್ತು. ಕರ್ತವ್ಯ ನಿರ್ವಹಣೆ ವೇಳೆ ಕೋಲಾರದ ನರಸಾಪುರದಲ್ಲಿ ಸಮೀಕ್ಷೆ ಕಾರ್ಯದಲ್ಲಿ ಭಾಗಿಯಾಗಿದ್ದ ವೇಳೆ ನಾಪತ್ತೆಯಾಗಿದ್ದರು.

ಹೀಗಾಗಿ ಅವರ ಕುಟುಂಬಸ್ತರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಬಗ್ಗೆ ತನಿಖೆ ನಡೆಸಲಾಗಿ ನಾಪತ್ತೆಯಾಗಿದ್ದ ಎರಡು ದಿನಗಳ ಬಳಿಕ ಅಖ್ತರ್ ಬೇಗಂ(53) ಅವರ ಮೃತದೇಹ ಕೆರೆಯಲ್ಲಿ ಕೆಜಿಎಫ್ ತಾಲ್ಲೂಕಿನ ಐಪಲ್ಲಿ ಕರೆಯಲ್ಲಿ ಪತ್ತೆಯಾಗಿದೆ. ಈ ಸಾವಿನ ಬಗ್ಗೆ ಸಾಕಷ್ಟು ಅನುಮಾನಗಳು ಮೂಡಿದ್ದು, ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದರ ಬಗ್ಗೆ ತನಿಖೆ ಮುಂದುವರೆದಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!