
ಪುತ್ತೂರು: ಸುಮಾರು 12 ವರ್ಷಗಳಿಂದ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ.
2014 ರ ಅಬಕಾರಿ ಜ್ಯಾರಿ ಮತ್ತು ಲಾಟರಿ ನಿಷೇಧ ದಳ ಪೊಲೀಸ್ ಠಾಣೆ ಅ.ಕ್ರ 54/2014 ಕಲಂ 32(3) ಕೆ.ಇ ಆಕ್ಟ್ (ಎಲ್.ಪಿ.ಸಿ ನಂ-06/2021) ಪ್ರಕರಣದಲ್ಲಿ ಆರೋಪಿಯಾಗಿದ್ದ ಕೆ. ಚಂದ್ರ ಶೇಖರನ್ (54), ಕಾಸರಗೋಡು, ಕೇರಳ ಎಂಬಾತನು ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದನು.
ದಕ್ಷಿಣ ಕನ್ನಡ ಜಿಲ್ಲಾ ಸಿ.ಇ.ಎನ್ ಠಾಣಾ ಪೊಲೀಸರು ವಿಶ್ವಾಸಾರ್ಹ ಮಾಹಿತಿ ಆಧರಿಸಿ ದಿನಾಂಕ 21-10-2025 ರಂದು ಕಾಸರಗೋಡು ಜಿಲ್ಲೆಯ ನುಳ್ಳಿಪ್ಪಾಡಿ ಪ್ರದೇಶದಲ್ಲಿ ಆರೋಪಿಯನ್ನು ಪತ್ತೆಹಚ್ಚಿ ದಸ್ತಗಿರಿ ಮಾಡಿದ್ದಾರೆ.
ಬಂಧಿತನನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.






