ಪುತ್ತೂರು: ಅ.20 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಅಶೋಕ ಜನಮನ 2025 ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾರೀ ಜನಸಂದಣಿ ಕಂಡುಬಂದಿದ್ದು, ಅದರ ಪರಿಣಾಮ ಕೆಲವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗುವ ಘಟನೆ ನಡೆದಿದೆ.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು. ಮಧ್ಯಾಹ್ನದ ವೇಳೆ ಉಡುಗೊರೆ ವಿತರಣೆ ಸಂದರ್ಭದಲ್ಲಿ ಜನಸಂದಣಿಯಿಂದ ಏಳು-ಎಂಟು ಮಂದಿ ಅಸ್ವಸ್ಥರಾಗಿದ್ದು, ಅವರನ್ನು ತಕ್ಷಣ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.

ಅಸ್ವಸ್ಥರಾದವರು ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದು, ಅವರ ಪೈಕಿ ಇಬ್ಬರು ಮಹಿಳೆಯರು ರಾತ್ರಿ ವೇಳೆ ಆಸ್ಪತ್ರೆಯಲ್ಲಿ ಉಳಿದಿದ್ದರು. ಸೋಮವಾರ ರಾತ್ರಿ ಶಾಸಕ ಅಶೋಕ್ ರೈ ಅವರು ಆಸ್ಪತ್ರೆ ಭೇಟಿ ನೀಡಿ, ಅಸ್ವಸ್ಥರಾದವರ ಆರೋಗ್ಯ ವಿಚಾರಿಸಿದರು. ಬಳಿಕ ಅವರು ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!