ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾನ ಪೆಟ್ರೋಲ್ ಪಂಪ್ ಬಳಿ ಗುರುವಾರ ತಡರಾತ್ರಿ ನಾಲ್ವರು ದುಷ್ಕರ್ಮಿಗಳು ಇಬ್ಬರಿಗೆ ಚೂರಿಯಿಂದ ಇರಿದ ಘಟನೆ ನಡೆದಿದೆ.
ಚೊಕ್ಕಬೆಟ್ಟು ನಿವಾಸಿ ನಿಝಾಮ್ (23) ಅವರಿಗೆ ಹೊಟ್ಟೆ ಭಾಗದಲ್ಲಿ ಗಂಭೀರ ಗಾಯವಾಗಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಹಸನ್ ಮುರ್ಷಿದ್ (18) ಅವರಿಗೆ ಸಣ್ಣ ಪ್ರಮಾಣದ ಗಾಯಗಳಾಗಿದ್ದು, ಮುಕ್ಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹನೀಫ್ ಗೊತ್ತಾ ಎಂಬ ಪ್ರಶ್ನೆಯಿಂದ ಆರಂಭವಾದ ಮಾತಿನ ಚಕಮಕಿಯ ವೇಳೆ ದುಷ್ಕರ್ಮಿಗಳು ಇರಿದು ಪರಾರಿಯಾದರೆಂದು ತಿಳಿದು ಬಂದಿದೆ. ಸುರತ್ಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸುವ ಪ್ರಕ್ರಿಯೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!