ಮದ್ಯಪಾನ ಮಾಡಿ ಶಾಲಾ ಬಸ್ಗಳನ್ನು ಚಾಲನೆ ಮಾಡುವ ಚಾಲಕರಿಗೆ ಬೆಂಗಳೂರು (Bengaluru) ಸಂಚಾರ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಇಂದು (ಅ.24) ಬೆಳಗ್ಗೆ 7 ಗಂಟೆಯಿಂದ 9.30ರ ವರೆಗೆ ಬೆಂಗಳೂರಿನ ವಿವಿಧೆಡೆ ಶಾಲಾ ಬಸ್ ಚಾಲಕರ ತಪಾಸಣೆ ಮಾಡಲಾಗಿದ್ದು, ಒಟ್ಟು 5,881 ಡ್ರೈವರ್ಗಳನ್ನು ಪರೀಕ್ಷಿಸಲಾಗಿದೆ.

ಆ ಪೈಕಿ 36 ಮಂದಿ ಮದ್ಯ ಸೇವಿಸಿ ಬಸ್ ಚಾಲನೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಪಾನಮತ್ತ ಚಾಲಕರ ವಿರುದ್ಧ ಕೇಸ್ ದಾಕಲಿಸಲಾಗಿದ್ದು, ಡಿಎಲ್ ರದ್ದುಪಡಿಸುವಂತೆ RTOಗೆ ಸಂಚಾರಿ ಪೊಲೀಸರು ಪತ್ರ ಬರೆದಿದ್ದಾರೆ.

ಜಂಟಿ ಪೊಲೀಸ್ ಆಯುಕ್ತರ ಸೂಚನೆಯಂತೆ ಕಾರ್ಯಾಚರಣೆ

ಶಾಲಾ ವಾಹನಗಳ ವಿರುದ್ಧ ವಿಶೇಷ ಕಾರ್ಯಾಚರಣೆ ಸಂಬಂಧ ಪಶ್ಚಿಮ ವಿಭಾಗದ ಸಂಚಾರ ಡಿಸಿಪಿ ಅನೂಪ್ ಶೆಟ್ಟಿ ಪ್ರತಿಕ್ರಿಯಿಸಿದ್ದು, ಸಂಚಾರ ವಿಭಾಗ ಜಂಟಿ ಪೊಲೀಸ್ ಆಯುಕ್ತರ ಸೂಚನೆಯಂತೆ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಶಾಲಾ ವಾಹನ ಚಾಲಕರಿಗೆ ಡ್ರಂಕ್‌ ಆ್ಯಂಡ್ ಡ್ರೈವ್ ಟೆಸ್ಟ್ ಮಾಡಲಾಗಿದ್ದು, ಈ ವೇಳೆ ಹಲವರು ಕುಡಿದು ವಾಹನ ಚಾಲನೆ ಮಾಡುತ್ತಿರುವುದು ಪತ್ತೆಯಾಗಿದೆ. ಅಂತಹವರ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ ಎಂದು ತಿಳಿಸಿದ್ದಾರೆ.

ಕಳೆದ ಕೆಲ ವರ್ಷಗಳ ಅಂಕಿ ಅಂಶವನ್ನು ಗಮನಿಸಿದರೆ ಮದ್ಯಪಾನ ಮಾಡಿ ಶಾಲಾ ವಾಹನ ಚಲಾಯಿಸುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. 2023ರಲ್ಲಿ 8 ಕೇಸ್, 2024ರಲ್ಲಿ 139 ಪ್ರಕರಣ ದಾಖಲಾಗಿದ್ದರೆ 2025ರ ಮೊದಲಾರ್ಧದಲ್ಲೇ (ಜೂನ್ 2025ರ ವರೆಗೆ) 67 ಪ್ರಕರಣಗಳು ವರದಿಯಾಗಿವೆ. ಹೀಗಾಗಿ ಶಾಲಾ ಬಸ್ಗಳಲ್ಲಿ ತೆರಳುವ ಮಕ್ಕಳು ಎಷ್ಟು ಸೇಫ್ ಎಂಬ ಪ್ರಶ್ನೆಯೂ ಪಾಲಕರಲ್ಲಿ ಉದ್ಭವಿಸಿದೆ. ಈ ಹಿನ್ನಲೆ ಶಾಲಾ ಬಸ್ಗಳಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಸಂಚಾರಿ ಪೊಲೀಸರು  ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!