ಚಿಕ್ಕಮಗಳೂರು: ಹೋಂ ಸ್ಟೇ ಒಂದರಲ್ಲಿ ತಂಗಿದ್ದ 27 ವರ್ಷದ ಯುವತಿ ಸ್ನಾನದ ಗೃಹದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶನಿವಾರ (ಅ.25) ಮುಂಜಾನೆ ಚಿಕ್ಕಮಗಳೂರು ತಾಲೂಕು ಹಾಂದಿ ಗ್ರಾಮದ ಹಿಪ್ಲಾ ಹೋಂ ಸ್ಟೇನಲ್ಲಿ ನಡೆದಿದೆ.

ಮೃತರು ಬೇಲೂರು ತಾಲ್ಲೂಕು ದೇವಲಾಪುರ ಮೂಲದ ದೇವರಾಜು ಗೌಡ ಅವರ ಪುತ್ರಿ ರಂಜಿತಾ. ಕುಟುಂಬ ಮೂಡಿಗೆರೆ ಪಟ್ಟಣದಲ್ಲೇ ವಾಸವಾಗಿದ್ದು, ಇವರ ಸಹೋದರ ಶರತ್ ಮೂಡಿಗೆರೆಯ ಗೆಂಡೇಹಳ್ಳಿ ರಸ್ತೆಯ ರವಿ ಕ್ಯಾಂಟೀನ್ ಪಕ್ಕ ಬೇಕರಿ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ರಂಜಿತಾ ದಾವಣಗೆರೆ ಮೂಲದ ಗೆಳತಿ ರೇಖಾ ಜೊತೆ ಶನಿವಾರದಂದು ಹೋಂ ಸ್ಟೇನಲ್ಲಿ ತಂಗಿದ್ದರು. ಬೆಳಗ್ಗೆ ಸುಮಾರು 9 ಗಂಟೆ ವೇಳೆಗೆ ಸ್ನಾನದ ಗೃಹದಲ್ಲಿ ಬಿದ್ದು ಮೃತಪಟ್ಟಿದ್ದಾರೆ. ಸಾವಿಗೆ ನಿಖರ ಕಾರಣ ಇನ್ನಷ್ಟೇ ಪತ್ತೆಯಾಗಬೇಕಿದೆ.

ಘಟನೆಯ ಕುರಿತು ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ರೇಖಾ ಎಂ.ಎಸ್‌.ಸಿ ಪದವೀಧರರಾಗಿದ್ದು, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವುದು ತಿಳಿದುಬಂದಿದೆ.


Leave a Reply

Your email address will not be published. Required fields are marked *

Join WhatsApp Group
error: Content is protected !!