ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ನಡುವೆ ನಡೆಯುತ್ತಿರುವ ರೈಲ್ವೆ ವಿದ್ಯುದ್ದೀಕರಣ ಕಾರ್ಯದಿಂದಾಗಿ, ಮಂಗಳೂರು ಬೆಂಗಳೂರು ನಡುವೆ ಸಂಚರಿಸುವ ಹಲವು ರೈಲುಗಳ ಸಮಯದಲ್ಲಿ ವ್ಯತ್ಯವಾಗಲಿದ್ದು. ಕೆಲವು ರೈಲುಗಳ ರದ್ದು ಮಾಡಲಾಗಿದೆ.

ಸಕಲೇಶಪುರ ಹಾಗೂ ಸುಬ್ರಹ್ಮಣ್ ರೋಡ್ ಘಾಟ್ ಸೆಕ್ಷನ್‌ನಲ್ಲಿ ರೈಲ್ವೇ ಕಾಮಗಾರಿ ಆರಂಭಗೊಳ್ಳುತ್ತಿದೆ.

ಈ ಭಾಗದಲ್ಲಿ ರೈಲ್ವೇ ವಿದ್ಯುದ್ದೀಕರಣ ಕಾಮಗಾರಿ ನವೆಂಬರ್ 2 ರಿಂದ ಆರಂಭಗೊಳ್ಳುತ್ತಿದೆ. ಹೀಗಾಗಿ ಈ ಮಾರ್ಗದಲ್ಲಿ ಸಂಚರಿಸುವ ಹಲವು ರೈಲು ಸೇವೆ ರದ್ದಾಗುತ್ತಿದೆ. ಈ ಕುರಿತು ನೈರುತ್ಯ ರೈಲ್ವೆ ಪ್ರಕಟಣೆ ಹೊರಡಿಸಿದೆ.

ಯಾವಾಗ ರೈಲು ಸಂಚಾರಗಳು ರದ್ದು

ರೈಲ್ವೇ ವಿದ್ಯುದ್ದೀಕರಣ ಕಾಮಗಾರಿ ಹಿನ್ನಲೆಯಲ್ಲಿ ಬೆಂಗಳೂರು-ಮಂಗಳೂರು ರೈಲ್ವೇ ಸೇವೆಯಲ್ಲಿ ವ್ಯತ್ಯಯವಾಗುತ್ತಿದೆ. ನವೆಂಬರ್ 2 ರಿಂದ ಕಾಮಗಾರಿ ಆರಂಭಗೊಳ್ಳಲಿದೆ. ಡಿಸೆಂಬರ್ 15ರ ವರೆಗೆ ಕಾಮಗಾರಿ ನಡೆಯಲಿದೆ. ಹೀಗಾಗಿ ಈ ಸಮಯದಲ್ಲಿ ಹಲವು ರೈಲು ಸಂಚಾರ ರದ್ದಾಗುತ್ತಿದೆ. ಪ್ರತಿ ದಿನ ನಾಲ್ಕು ಗಂಟೆಗಳ ಕಾಲ ಲೈನ್ ಬ್ಲಾಕ್ ತೆರೆದುಕೊಳ್ಳಲಿದೆ.

ಯಾವ ರೈಲು ಸೇವೆ ರದ್ದು?

1. ರೈಲು ಸಂಖ್ಯೆ 16539 ಯಶವಂತಪುರ-ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು ಮೊದಲು 01.11.2025 ರವರೆಗೆ ರದ್ದುಗೊಂಡಿತ್ತು. ಈಗ 08.11.2025 ರಿಂದ 13.12.2025 ರವರೆಗೆ ರದ್ದುಗೊಳ್ಳಲಿದೆ.
2. ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್-ಯಶವಂತಪುರ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು ಮೊದಲು 02.11.2025 ರವರೆಗೆ ರದ್ದುಗೊಂಡಿತ್ತು. ಈಗ 09.11.2025 ರಿಂದ 14.12.2025 ರವರೆಗೆ ರದ್ದುಗೊಳ್ಳಲಿದೆ.
3. ರೈಲು ಸಂಖ್ಯೆ 16575 ಯಶವಂತಪುರ – ಮಂಗಳೂರು ಜಂಕ್ಷನ್ ಗೋಮಟೇಶ್ವರ ಟ್ರೈನ್-ವೀಕ್ಲಿ ಎಕ್ಸ್’ಪ್ರೆಸ್ ಮೊದಲು 30.10.2025 ರವರೆಗೆ ರದ್ದುಗೊಂಡಿತ್ತು. ಈಗ 02.11.2025 ರಿಂದ 14.12.2025 ರವರೆಗೆ ರದ್ದುಗೊಳ್ಳಲಿದೆ.
4. ರೈಲು ಸಂಖ್ಯೆ 16576 ಮಂಗಳೂರು ಜಂಕ್ಷನ್-ಯಶವಂತಪುರ ಟ್ರೈ-ವೀಕ್ಲಿ ಎಕ್ಸ್’ಪ್ರೆಸ್ ಮೊದಲು 30.10.2025 ರವರೆಗೆ ರದ್ದುಗೊಂಡಿತ್ತು. ಈಗ 03.11.2025 ರಿಂದ 15.12.2025 ರವರೆಗೆ ರದ್ದುಗೊಳ್ಳಲಿದೆ.
5. ರೈಲು ಸಂಖ್ಯೆ 16515 ಯಶವಂತಪುರ – ಕಾರವಾರ ಟ್ರೈ-ವೀಕ್ಲಿ ಎಕ್ಸ್’ಪ್ರೆಸ್ ಮೊದಲು 31.10.2025 ರವರೆಗೆ ರದ್ದುಗೊಂಡಿತ್ತು. ಈಗ 03.11.2025 ರಿಂದ 15.12.2025 ರವರೆಗೆ ರದ್ದುಗೊಳ್ಳಲಿದೆ.
6. ರೈಲು ಸಂಖ್ಯೆ 16516 ಕಾರವಾರ – ಯಶವಂತಪುರ ಟ್ರೈ-ವೀಕ್ಲಿ ಎಕ್ಸ್’ಪ್ರೆಸ್ ಮೊದಲು 01.11.2025 ರವರೆಗೆ ರದ್ದುಗೊಂಡಿತ್ತು. ಈಗ 04.11.2025 ರಿಂದ 16.12.2025 ರವರೆಗೆ ರದ್ದುಗೊಳ್ಳಲಿದೆ.
ಮಂಗಳೂರು-ಬೆಂಗಳೂರು ಬೆಳಗಿನ ರೈಲು ರದ್ದು ವಿಸ್ತರಣೆ
ಭಾರಿ ಮಳೆಯ ಕಾರಣ ರದ್ದಾಗಿದ್ದ ಮಂಗಳೂರು ಬೆಂಗಳೂರು ಬೆಳಗಿನ ರೈಲುಗಳ ರದ್ದು ನಿರ್ಧಾರವನ್ನು ಕಳೆದ ತಿಂಗಳು ವಿಸ್ತರಣೆ ಮಾಡಲಾಗಿದೆ. ವಿದ್ಯುದ್ದೀಕರಣ ಕಾಮಗಾರಿ ಹಿನ್ನಲೆಯಲ್ಲಿ ಈ ರೈಲು ಸಂಚಾರವನ್ನು ಡಿಸೆಂಬರ್ 16ರ ವರೆಗೆ ರದ್ದು ಮಾಡಲಾಗಿದೆ.

ಹೆಚ್ಚಿನ ಮಾಹಿತಿಗಳಿಗಾಗಿ ರೈಲ್ವೆ ಹೆಲ್ಪ್ ಲೈನ್ ಗಳನ್ನು ಸಂಪರ್ಕಿಸಬಹುದಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!