ಪುತ್ತೂರು: ಪ್ರಗತಿ ಆಸ್ಪತ್ರೆ, ಪ್ರಗತಿ ಪ್ಯಾರಾ ಮೆಡಿಕಲ್ ಕಾಲೇಜ್ ಮತ್ತು ಅಲೈಡ್ ಹೆಲ್ತ್ ಸೈನ್ಸ್ ಕಾಲೇಜ್ ಬೋಳ್ವಾರ್ ಪುತ್ತೂರು ಇಲ್ಲಿ ವಿಶ್ವ ಪೋಲಿಯೋ ದಿನದ ಅಂಗವಾಗಿ “ಪೋಲಿಯೋ ನಿರ್ಮೂಲನೆ ಜಾಗೃತಿ” ಕಾರ್ಯಕ್ರಮ ಇತ್ತೀಚೆಗೆ ಜರುಗಿತು.

ಪುತ್ತೂರು ರೋಟರಿ ಕ್ಲಬ್, ರೋಟರಿ ಪುತ್ತೂರು ಈಸ್ಟ್, ರೋಟರಿ ಪುತ್ತೂರು ಸಿಟಿ, ರೋಟರಿ ಪುತ್ತೂರು ಯುವ, ರೋಟರಿ ಪುತ್ತೂರು ಸ್ವರ್ಣ, ರೋಟರಿ ಪುತ್ತೂರು ಸೆಂಟ್ರಲ್, ರೋಟರಿ ಪುತ್ತೂರು ಎಲೈಟ್, ರೋಟರಿ ಪುತ್ತೂರು ಬಿರುಮಲೆ ಹಿಲ್ಸ್ ಮತ್ತು ಇನ್ನರ್ ವ್ಹೀಲ್ ಕ್ಲಬ್ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಪ್ರಗತಿ ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಶ್ರೀಪತಿ ರಾವ್, ಆಡಳಿತಾಧಿಕಾರಿ ಶ್ರೀಮತಿ ಪ್ರೀತಾ ಹೆಗ್ಡೆ, ಪುತ್ತೂರಿನ ವಿವಿಧ ರೋಟರಿ ಸಂಸ್ಥೆಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಮತ್ತು ಸದಸ್ಯರು, ಪ್ರಗತಿ ಸಂಸ್ಥೆಗಳ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.

ಮೌನೇಶ್ ವಿಶ್ವಕರ್ಮ ಹಾಗೂ ತಂಡ ಜಾಗೃತಿ ಗೀತೆಗಳ ಗಾಯನದ ಮೂಲಕ ಕಾರ್ಯಕ್ರಮಕ್ಕೆ ಬಣ್ಣ ತುಂಬಿದರು.

ಪೋಲಿಯೋ ಸಂಪೂರ್ಣ ನಿರ್ಮೂಲನೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!