
ಬಂಟ್ವಾಳ: ಪಾಣೆಮಂಗಳೂರು ಫೈ ಓವರ್ ಬಳಿ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ದುರಂತದಲ್ಲಿ ಪುತ್ತೂರಿನ ಯುವಕ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ವರದಿಯಾಗಿದೆ.
ಮೃತ ಯುವಕನನ್ನು ಪುತ್ತೂರು ಕುದ್ಮಾರು ನಿವಾಸಿ ಕಾರ್ತಿಕ್ (24) ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಮೂವರು ಮಂದಿ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಕಾರ್ತಿಕ್ ಅವರಿಗೆ ತೀವ್ರ ಗಾಯವಾಗಿತ್ತು.
ಗಂಭೀರ ಗಾಯಗೊಂಡ ಕಾರ್ತಿಕ್ ರನ್ನು ತಕ್ಷಣ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ತೀರಿದರು ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.






