ಆಂಧ್ರಪ್ರದೇಶ ಕರ್ನೂಲ್ ಬಳಿ ನಡೆದ ಭೀಕರ ಬಸ್ ಅಗ್ನಿ ದುರಂತದ ಬೆನ್ನಲ್ಲೇ ಸಾರಿಗೆ ಇಲಾಖೆ (Transport Department) ಎಚ್ಚೆತ್ತಿದ್ದು, ಇದೀಗ ಭರ್ಜರಿ ಕಾರ್ಯಾಚರಣೆ (Raid) ನಡೆಸಿ ತೆರಿಗೆ ವಂಚನೆ, ಸುರಕ್ಷಿತ ವ್ಯವಸ್ಥೆ ಇಲ್ಲದ 30 ಬಸ್ ಗಳನ್ನು ಸೀಜ್ (Seized) ಮಾಡಲಾಗಿದೆ.

ಆಂಧ್ರದ ಕರ್ನೂಲ್ ನಲ್ಲಿ ನಡೆದ ಬಸ್ ಅಗ್ನಿ ದುರಂತದಿಂದ ಸುಮಾರು 20 ಕ್ಕೂ ಹೆಚ್ಚು ಜನ ಸಜೀವ ದಹನವಾಗಿದ್ದರು. ಇದೀಗ ಬೆಂಗಳೂರಿನ ಗ್ರಾಮಾಂತರ ದೇವನಹಳ್ಳಿ ಟೋಲ್ ಸಮೀಪ ಬಸ್ ಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.

ಸಾರಿಗೆ ಇಲಾಖೆಯ ಅಪರ ಆಯುಕ್ತೆ ಓಂಕಾರೇಶ್ವರಿ ಮತ್ತು ಜಂಟಿ ಆಯುಕ್ತೆ ಶೋಭಾ ಅವರ ನೇತೃತ್ವದಲ್ಲಿ ವ್ಯಾಪಕ ಜಂಟಿ ಕಾರ್ಯಾಚರಣೆ ನಡೆಸಲಾಗಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ 30ಕ್ಕೂ ಹೆಚ್ಚು ಸ್ವೀಪರ್ ಕೋಚ್ ಬಸ್‌ಗಳು ತೆರಿಗೆ ವಂಚನೆ ಹಾಗೂ ಸುರಕ್ಷತಾ ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಸೀಜ್ ಮಾಡಲಾಗಿದೆ.

ಕಾರ್ಯಾಚರಣೆ ಮುಂಜಾನೆ 4 ಗಂಟೆಯಿಂದ ಪ್ರಾರಂಭವಾಗಿ ಬೆಳಗ್ಗೆ ತನಕ ಮುಂದುವರಿಯಿತು. ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಟಿಸಿ ಬಸ್‌ಗಳ ಮೂಲಕ ದೇವನಹಳ್ಳಿ ರಿಂದ ಮೆಜೆಸ್ಟಿಕ್ ವರೆಗೆ ಬದಲಿ ವ್ಯವಸ್ಥೆ ಕಲ್ಪಿಸಲಾಗಿದೆ.

ಕರ್ನೂಲ್‌ ದುರಂತದ ಬೆನ್ನಲ್ಲೇ ಎಚ್ಚೆತ್ತ ಸಾರಿಗೆ ಇಲಾಖೆ, ಬಸ್‌ಗಳಲ್ಲಿ ಈ ವಸ್ತುಗಳನ್ನ ಕೊಂಡೊಯ್ಯಲು ನಿರ್ಬಂಧ!

ಆ ಘೋರ ದುರಂತದ ಬೆನ್ನಲ್ಲೇ ರಾಜ್ಯದ ಸಾರಿಗೆ ಇಲಾಖೆ ಕಣ್ಣು ಬಿಟ್ಟಿದೆ. ಬಸ್‌ಗಳಲ್ಲಿ (Bus) ಹಲವು ವಸ್ತುಗಳನ್ನ ಕೊಂಡೊಯ್ಯಲು ನಿರ್ಬಂಧ ಹೇರಿದೆ.

ಹಾವೇರಿ ಜಿಲ್ಲೆಯ ಕುಣಿಮರಳಿಹಳ್ಳಿ ಕಡೆ ಬಸ್ ದುರಂತ ಸಂಭವಿಸಿತ್ತು. ಅದಾದ ಬಳಿಕ ಮೊನ್ನೆಯಷ್ಟೇ ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಬೆಂಕಿಗೆ ಸುಟ್ಟು ಹಲವರು ಮೃತಪಟ್ಟಿದ್ದರು. ಇದರ ಬೆನ್ನಲ್ಲೆ ಎಚ್ಚೆತ್ತುಕೊಂಡಿರುವ ಕರ್ನಾಟಕ ಸಾರಿಗೆ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಅವರು, ಇಲಾಖೆ ವ್ಯವಸ್ಥಾಪಕ ನಿರ್ದೇಶಕರಿಗೆ ಮಹತ್ವದ ಸೂಚನೆ ನೀಡಿದ್ದಾರೆ.

ಕರ್ನಾಟಕದಾದ್ಯಂತ ಸಾವಿರಾರು ಸಾರ್ವಜನಿಕ ಬಸ್‌ಗಳ ಸಂಚರಿಸುತ್ತವೆ. ಬಸ್ಸುಗಳಲ್ಲಿನ ಸುರಕ್ಷತಾ ಕ್ರಮಗಳ ಕುರಿತು ಪರಿಶೀಲಿಸುವ ಬಗ್ಗೆ ಸಚಿವರು ಸೂಚನೆ ನೀಡಿದ್ದಾರೆ. ಕರ್ನೂಲ್ ಬಸ್ ದುರಂತ ತೀವ್ರ ದುಃಖಕರವಾದ ಸಂಗತಿ. ಆ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿರುವ ಸುರಕ್ಷತಾ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಬೇಕು ಎಂದು ತಿಳಿಸಿದ್ದಾರೆ.

ಕರ್ನೂಲ್ ಬಸ್ ದುರಂತದ ಬೆನ್ನಲ್ಲೇ ರಾಜ್ಯ ಸಾರಿಗೆ ಇಲಾಖೆ ಎಚ್ಚೆತ್ತುಕೊಂಡಿದೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ 4 ಸಾರಿಗೆ ನಿಗಮಗಳ ಎಂಡಿಗಳಿಗೆ ಬಸ್‌ಗಳಲ್ಲಿ ಕೆಲ ನಿಯಮಗಳನ್ನ ಕಡ್ಡಾಯಗೊಳಿಸಲು ಸೂಚಿಸಿದ್ದಾರೆ.

ಬಸ್‌ಗಳಲ್ಲಿ ಈ ವಸ್ತುಗಳನ್ನ ಕೊಂಡೊಯ್ಯಲು ನಿರ್ಬಂಧ
ಬಸ್‌ಗಳಲ್ಲಿ ಬೆಂಕಿ ಸ್ಪರ್ಶಕ್ಕೆ ಸರಳವಾಗಿ ಉರಿಯುವ ವಸ್ತುಗಳ ಸಾಗಣಿಕೆಗೆ ಬ್ರೇಕ್ ಹಾಕಬೇಕು. ಬಸ್ಗಳಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನ ತೆಗೆದುಕೊಂಡು ಹೋಗಬಾರದು. ಎಲ್ಲಾ ಎಸಿ ಬಸ್‌ಗಳಲ್ಲಿ ಸುತ್ತಿಗೆ ಕಡ್ಡಾಯಗೊಳಿಸಿದ್ದು, ಇದರಿಂದ ತುರ್ತು ಸಂದರ್ಭಗಳಲ್ಲಿ ಕಿಟಕಿಗಳನ್ನು ಒಡೆಯಲು ಬಳಸಲು ಸಹಾಯವಾಗಲಿದೆ. ಲಗೇಜ್ ಸಾಗಿಸುವ ಜಾಗದಲ್ಲಿ ಯಾವುದೇ ವ್ಯಕ್ತಿ ಮಲಗಲು ಅವಕಾಶ ನೀಡಬಾರದು. ಬಸ್ಸುಗಳ ನವೀಕರಣ‌ದ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!