ಬಂಟ್ವಾಳ: ಪುತ್ತೂರಿನಿಂದ ಮಂಗಳೂರಿನತ್ತ ಗಂಭೀರ ಗಾಯಾಳುವನ್ನು ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ಸಂಚಾರಕ್ಕೆ ಅಡಚಣೆ ಉಂಟುಮಾಡಿದ ಪ್ರಕರಣ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಅ.30ರಂದು ಮಧ್ಯಾಹ್ನ ಸುಮಾರು 1.30ರ ವೇಳೆಗೆ KA.22.C.1382 ಸಂಖ್ಯೆಯ ಅಂಬ್ಯುಲೆನ್ಸ್ ಬಿಸಿಲೆಘಾಟ್ ಅಪಘಾತದ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯುತ್ತಿದ್ದ ವೇಳೆ, ಬಿ.ಸಿ.ರೋಡ್ ಎನ್.ಜಿ. ಸರ್ಕಲ್ ಬಳಿ KA.19.EK.0696 ಸಂಖ್ಯೆಯ ದ್ವಿಚಕ್ರ ವಾಹನ ಸವಾರನು ಅಂಬ್ಯುಲೆನ್ಸ್‌ನ ಸೈರನ್ ಶಬ್ದ ಕೇಳಿದರೂ ದಾರಿ ಬಿಡದೆ ಸಂಚಾರಕ್ಕೆ ಅಡಚಣೆ ಉಂಟುಮಾಡಿದನೆಂದು ತಿಳಿದುಬಂದಿದೆ.

ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಬೆಟ್ಟಂಪಾಡಿ ಗ್ರಾಮದ 38 ವರ್ಷದ ಮಹಮ್ಮದ್ ಮನ್ಸೂರ್ ಅವರ ವಿರುದ್ಧ ಅ.ಕ್ರ.128/2025ರಡಿ ಭಾರತೀಯ ನ್ಯಾಯ ಸಂಹಿತೆಯ (BNS) ಕಲಂ 110 ಮತ್ತು 125 ಅನ್ವಯ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಲಾಗುತ್ತಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!