
ಬೆಂಗಳೂರು: ದಕ್ಷಿಣ ಕನ್ನಡ ಗ್ರಾಮಾಂತರ ಜಿಲ್ಲೆಯ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಎಚ್. ಮಹಮ್ಮದ್ ಅಲಿ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತ ನೇಮಕಾತಿ ಆದೇಶವನ್ನು ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರು ಬೆಂಗಳೂರಿನಲ್ಲಿ ಹಸ್ತಾಂತರಿಸಿದರು.
ಪುತ್ತೂರು, ಬಂಟ್ವಾಳ, ಬೆಳ್ತಂಗಡಿ ಮತ್ತು ಸುಳ್ಯ ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡ ದಕ್ಷಿಣ ಕನ್ನಡ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಹಮ್ಮದ್ ಆಲಿ ಅವರನ್ನು ನೇಮಿಸಿ ಜವಾಬ್ದಾರಿ ವಹಿಸಲಾಗಿದೆ
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ಪ್ರಸ್ತುತ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷರಾಗಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಎಚ್. ಮಹಮ್ಮದ್ ಆಲಿ ಅವರಿಗೆ ಈ ಹೊಸ ಜವಾಬ್ದಾರಿ ನೀಡಲಾಗಿದೆ.
ಮಂಡಲ ಪಂಚಾಯಿತಿ ಪ್ರಧಾನ, ಪುರಸಭೆ ಸದಸ್ಯ, ನಗರ ಸಭೆ ಸದಸ್ಯ, ಉಪಾಧ್ಯಕ್ಷ, ಸ್ಥಾಯಿ ಸಮಿತಿ ಅಧ್ಯಕ್ಷ ಮತ್ತು ವಿಪಕ್ಷ ನಾಯಕರಾಗಿ ಯಶಸ್ವಿಯಾಗಿ ಸೇವೆ ಸಲ್ಲಿಸಿರುವ ಅವರು, ಪ್ರಸ್ತುತ ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.
ಕ್ರಿಯಾಶೀಲ ವ್ಯಕ್ತಿತ್ವ ಮತ್ತು ಉತ್ತಮ ಸಂಘಟಕರಾಗಿರುವ ಮಹಮ್ಮದ್ ಆಲಿ ಅವರು, ಪಕ್ಷದ ವಿವಿಧ ಹುದ್ದೆಗಳಲ್ಲಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ ಅನುಭವಿ ನಾಯಕರಾಗಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯ ಪ್ರಚಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಮುನೀರ್ ಜನ್ಸಾಲೆ, ರಾಜ್ಯ ಸಂಯೋಜಕರು ಕೆ.ಪಿ. ತೋಮಸ್, ಶಶಿಕಿರಣ್ ರೈ (ಪುತ್ತೂರು) ಹಾಗೂ ಪುತ್ತೂರಿನ ಉದ್ಯಮಿ ಕೆ.ಪಿ. ಅಹ್ಮದ್ ಹಾಜಿ ಆಕರ್ಷನ್ ಮೊದಲಾದವರು ಉಪಸ್ಥಿತರಿದ್ದರು.






