ಸುಳ್ಯ: ಸಾಮಾಜಿಕ ಜಾಲತಾಣ Facebook ನಲ್ಲಿ “Purush Acharya” ಎಂಬ ಖಾತೆಯಿಂದ ದಸರಾ ಉದ್ಘಾಟನೆ ಮಾಡಿದ ಬಾನು ಮುಸ್ತಾಕ್ ಹಾಗೂ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳ ಬಗ್ಗೆ ಅಸಭ್ಯ ಪದಗಳಲ್ಲಿ ನಿಂದಿಸಿ ಪೋಸ್ಟ್ ಮಾಡಿದ ಘಟನೆ ಹಿನ್ನೆಲೆಯಲ್ಲಿ, ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 112/2025 ಅಡಿಯಲ್ಲಿ ಭಾರತ ದಂಡ ಸಂಹಿತೆ ಕಲಂ 296, 196, 354 (BNS) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಇದೇ ರೀತಿಯ ಪ್ರಕರಣ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಕೂಡಾ 55/2025 ಅಡಿಯಲ್ಲಿ ಕಲಂ 353(3) ಮತ್ತು 353(4) BNS ಪ್ರಕಾರ ದಾಖಲಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್‌ನ ಸಹಕಾರದಿಂದ ಸುಳ್ಯ ಪೊಲೀಸರು ತನಿಖೆ ಕೈಗೊಂಡು, ಬಂಟ್ವಾಳ ತಾಲೂಕಿನ ಬರಿಮಾರು ನಿವಾಸಿ ಪುರುಷೋತ್ತಮ ಆಚಾರ್ಯ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಪೊಲೀಸರು ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲು ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!