
ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿ ಕುರಿತ ಭಕ್ತರ ಸಭೆ ನವೆಂಬರ್ 2ರಂದು ಬೆಳಗ್ಗೆ 10 ಗಂಟೆಗೆ ದೇವಳದ ಸಭಾಭವನದಲ್ಲಿ ನಡೆಯಲಿದೆ.
ಸಭೆಗೆ ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಲಿದ್ದು, ದೇವಸ್ಥಾನದ ಅಭಿವೃದ್ಧಿಗೆ ಸಂಬಂಧಿಸಿದ ಅಗತ್ಯ ಸಲಹೆ–ಸೂಚನೆಗಳನ್ನು ಭಕ್ತರಿಂದ ಸ್ವೀಕರಿಸಲಾಗುವುದು.
ಭಕ್ತರು ಸಭೆಗೆ ಆಗಮಿಸಿ ತಮ್ಮ ಅಮೂಲ್ಯ ಸಲಹೆಗಳನ್ನು ನೀಡುವಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಹಾಗೂ ಕಾರ್ಯನಿರ್ವಹಣಾಧಿಕಾರಿ ಕೆ.ವಿ. ಶ್ರೀನಿವಾಸ್ ಕೋರಿದ್ದಾರೆ.






