ರಾಜಧಾನಿ ಬೆಂಗಳೂರಿನಲ್ಲಿ (Bengaluru) ಮತ್ತೊಂದು ಭೀಕರ ಅಪಘಾತ (Road Mishap) ಸಂಭವಿಸಿದೆ. ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ (Bike) ಅಂಬುಲೆನ್ಸ್‌ (Ambulance) ಡಿಕ್ಕಿ ಹೊಡೆದು ದಂಪತಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಾಂತಿನಗರ ಬಸ್‌ ನಿಲ್ದಾಣದಲ್ಲಿ ನಡೆದಿದೆ.

ವರದಿಗಳ ಪ್ರಕಾರ ರೆಡ್‌ ಸಿಗ್ನಲ್‌ ಇದ್ದಿದ್ದರಿಂದ ಬೈಕ್‌ ಸವಾರ ನಿಲ್ಲಿಸಿದ್ದರು. ಈ ವೇಳೆ ರಿಚ್ಮಂಡ್‌ ಸರ್ಕಲ್‌ ಕಡೆಯಿಂದ ವೇಗವಾಗಿ ಬಂದ ಅಂಬುಲೆನ್ಸ್‌ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಡಿಕ್ಕಿಯ ರಭಸಕ್ಕೆ ಅಂಬುಲೆನ್ಸ್‌ ಬೈಕ್‌ ಅನ್ನು 50 ಮೀ. ದೂರದವರೆಗೆ ಎಳೆದೊಯ್ದಿದೆ. ಅಪಘಾತದ ಬಳಿಕ ಅಂಬುಲೆನ್ಸ್‌ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ದುರಂತದಲ್ಲಿ ದಂಪತಿಯಾದ ಇಸ್ಮಾಯಿಲ್‌ (40) ಸಮೀನಾಬಾನು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇನ್ನಿಬ್ಬರಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಂಬುಲೆನ್ಸ್‌ ಚಾಲಕನ ನಿರ್ಲಕ್ಷ್ಯ ಹಾಗೂ ವೇಗದ ಚಾಲನೆಯೇ ದುರಂತಕ್ಕೆ ಕಾರಣ ಎಂಬುದು ತಿಳಿದು ಬಂದಿದೆ.

ಘಟನೆಯ ಬಳಿಕ ಸ್ಥಳೀಯರು ಆಕ್ರೋಶಗೊಂಡು ಅಂಬುಲೆನ್ಸ್‌ ಅನ್ನು ದೂಡಿ ಪಲ್ಟಿ ಮಾಡಿದ್ದಾರೆ. ಇದೀಗ ತಲೆಮರೆಸಿಕೊಂಡಿರುವ ಅಂಬುಲೆನ್ಸ್‌ ಚಾಲಕನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!