ಐಸಿಸಿ ಮಹಿಳಾ ಏಕದಿನ ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ ಭಾರತ ತಂಡ ಚೊಚ್ಚಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ.

2025ರ ಮಹಿಳಾ ವಿಶ್ವಕಪ್ ಫೈನಲ್‌ನಲ್ಲಿ ಆತಿಥೇಯ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಚೊಚ್ಚಲ ಬಾರಿಗೆ ಏಕದಿನ ವಿಶ್ವಕಪ್ ಗೆದ್ದು ಇತಿಹಾಸ ಬರೆದಿದೆ.ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಇಂದು ನಡೆದ ಫೈನಲ್ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾ ತಂಡವನ್ನು 52 ರನ್ ಗಳ ಅಂತರದಲ್ಲಿ ಮಣಿಸಿ ಭರ್ಜರಿ ಜಯ ದಾಖಲಿಸಿತು.

ಭಾರತ ನೀಡಿದ್ದ 299 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ದಕ್ಷಿಣ ಆಫ್ರಿಕಾ ತಂಡ 45.3 ಓವರ್ ನಲ್ಲಿ 246 ರನ್ ಗಳಿಗೇ ತನ್ನೆಲ್ಲಾ ವಿಕೆಟ್ ಕಳೆದು ಕೊಂಡು 52 ರನ್ ಗಳ ಅಂತರದಲ್ಲಿ ಭಾರತದ ಎದುರು ಮಂಡಿಯೂರಿತು.

ಲಾರಾ ವೋಲ್ವಾರ್ಡ್ತ್ ಹೋರಾಟ ವ್ಯರ್ಥ

ಬೃಹತ್ ಗುರಿಯನ್ನು ಬೆನ್ನು ಹತ್ತಿದ ದಕ್ಷಿಣ ಆಫ್ರಿಕಾ ತಂಡ ಭರ್ಜರಿ ಆರಂಭ ಪಡೆಯಿತು. ನಾಯಕಿ ಲಾರಾ ವೋಲ್ವಾರ್ಡ್ತ್ ಶತಕ ಸಿಡಿಸಿ ಪಂದ್ಯದ ನಿರ್ಣಾಯಕ ಘಟ್ಟದಲ್ಲಿ ವಿಕೆಟ್ ಕೈ ಚೆಲ್ಲಿದರು. ಅವರಿಗೆ ಬ್ರಿಟ್ಸ್ (23), ಲೂಸ್ (25), ಡರ್ಕ್ ಸೆನ್ (35) ಸಾಥ್ ನೀಡಿದರೂ ತಂಡವನ್ನು ಸೋಲಿನಿಂದ ಪಾರು ಮಾಡಲಾಗಲಿಲ್ಲ.

Leave a Reply

Your email address will not be published. Required fields are marked *

Join WhatsApp Group
error: Content is protected !!