ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯ ಪ್ರಥಮ ವರ್ಷದ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ವಿಭಾಗದ ವಿದ್ಯಾರ್ಥಿ, ಸಂಪ್ಯ ನಿವಾಸಿ ಹಾಗೂ ಪುತ್ತೂರು ಟೌನ್ ಬ್ಯಾಂಕ್‌ನ ಉದ್ಯೋಗಿಯಾಗಿರುವ ಉದಯಕುಮಾರ್ ಬಲ್ಲಾಳ್ ಮತ್ತು ಅನ್ನಪೂರ್ಣೇಶ್ವರಿ ದಂಪತಿಗಳ ಪುತ್ರ ನಿಕ್ಷೇಪ್‌ಕೃಷ್ಣ ಅವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ರಾಜ್ಯಮಟ್ಟದ ಅಂತರ್‌ಕಾಲೇಜು ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ.

ಬೆಂಗಳೂರು ಆರ್.ವಿ. ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್‌ನ ಆಶ್ರಯದಲ್ಲಿ ನಡೆದ ಈ ಸ್ಪರ್ಧೆಯಲ್ಲಿ 75 ಕೆ.ಜಿ. ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ನಿಕ್ಷೇಪ್‌ಕೃಷ್ಣ ಅವರು ಚಿನ್ನದ ಪದಕದ ಸಾಧನೆ ಮಾಡಿದ್ದಾರೆ.

ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಅವರ ಮಾರ್ಗದರ್ಶನ ದೊರಕಿತ್ತು ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಮಹೇಶ್‌ಪ್ರಸನ್ನ ಕೆ. ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!