
ಪುತ್ತೂರು:ಸಾರ್ವಜನಿಕ ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣದ ತನಿಖೆಯ ಭಾಗವಾಗಿ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಬುಧವಾರ ಸಂಜೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಹಾಜರಾದರು.
ಅಕ್ಟೋಬರ್ 20 ರಂದು ಪುತ್ತೂರು ತಾಲೂಕಿನ ಉಪ್ಪಳಿಗೆಯಲ್ಲಿ ನಡೆದ “ದೀಪೋತ್ಸವ” ಕಾರ್ಯಕ್ರಮದಲ್ಲಿ ಮಾಡಿದ ಭಾಷಣ ವಿರುದ್ಧ ಮಹಿಳಾ ಪರ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ಅವರ ದೂರಿನ ಆಧಾರದ ಮೇಲೆ ಠಾಣೆಯ ತನಿಖಾಧಿಕಾರಿಯಿಂದ ನೀಡಲಾಗಿದ್ದ ನೊಟೀಸ್ ಹಿನ್ನೆಲೆಯಲ್ಲಿ ಭಟ್ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತಿಳಿದುಬಂದಿದೆ.
ಅಕ್ಟೋಬರ್ 25 ರಂದು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಭಟ್ ಹಾಗೂ ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲಾಗಿತ್ತು.ಪೊಲೀಸರು ಈ ಕುರಿತು ತನಿಖೆ ಮುಂದುವರೆಸಿದ್ದಾರೆ.






