
ಪುತ್ತೂರು, ನ. 8: ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯರನ್ನು ಆಟೋ ರಿಕ್ಷಾದಲ್ಲಿ ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದಡಿ ಆಟೋ ಚಾಲಕನ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.
ಮಹಿಳಾ ಪೊಲೀಸ್ ಠಾಣೆಗೆ ನೀಡಿದ ದೂರಿನ ಪ್ರಕಾರ, ಸ್ಥಳೀಯ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರನ್ನು ಕೆಲ ದಿನಗಳ ಹಿಂದೆ ಅಪರಿಚಿತ ವ್ಯಕ್ತಿಯೊಬ್ಬ ಆಟೋ ರಿಕ್ಷಾದಲ್ಲಿ ಹಿಂಬಾಲಿಸಿ ಕಿರುಕುಳ ನೀಡಿದ್ದಿದ್ದಾನೆ.
ಇದೇ ಘಟನೆ ದಿನಾಂಕ 08-11-2025ರಂದು ಬೆಳಿಗ್ಗೆಯೂ ಪುನರಾವರ್ತನೆಯಾಗಿದ್ದು, ಆರೋಪಿಯು ಮತ್ತೆ ಆಟೋ ರಿಕ್ಷಾದಲ್ಲಿ ಬಂದು ಬಾಲಕಿಯರಿಗೆ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.
ಈ ಕುರಿತು ಮಾಹಿತಿ ಸಂಗ್ರಹಿಸಿದಾಗ, ಆಟೋ ಚಾಲಕನ ಹೆಸರು ಪ್ರಸಾದ್ ಎಂದು ತಿಳಿದುಬಂದಿದ್ದು, ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಅ.ಕ್ರ – 83/2025
BNS 2023 ಕಲಂ 78(2) ಹಾಗೂ POCSO Act 2012 ಕಲಂ 12 ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಮುಂದಿನ ವಿಚಾರಣೆ ನಡೆಯುತ್ತಿದ್ದು, ಆರೋಪಿಯ ಪತ್ತೆ ಮತ್ತು ಕಾನೂನು ಕ್ರಮ ಕೈಗೊಳ್ಳುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.






