ಪುತ್ತೂರು: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನದ ಅಂಗವಾಗಿ ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಜಿಲ್ಲಾಡಳಿತ, ಮೇರಾ ಯುವ ಭಾರತ್, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಏಕತಾ ನಡಿಗೆ ನಡೆಯಿತು.

ನೆಹರುನಗರದ ವಿವೇಕಾನಂದ ಕಾಲೇಜು ಬಳಿಯ ವಿವೇಕಾನಂದ ಪ್ರತಿಮೆ ಬಳಿ ನಡೆದ ಕಾರ್ಯಕ್ರಮದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಪಾದಯಾತ್ರೆಗೆ ಚಾಲನೆ ನೀಡಿದರು. ನೆಹರುನಗರದಿಂದ ಹೊರಟ ನಡಿಗೆ ಮಂಜಲ್ಪಡ್ಡು, ಬೊಳುವಾರು, ಮುಖ್ಯರಸ್ತೆ ಮಾರ್ಗವಾಗಿ ಸಾಗಿ, ಪ್ರಧಾನ ಅಂಚೆ ಕಚೇರಿ ಮೂಲಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ನಟರಾಜ ವೇದಿಕೆಯಲ್ಲಿ ಸಮಾಪನಗೊಂಡಿತು.

ಅಲ್ಲಿ ನಡೆದ ಸಮಾರೋಪದಲ್ಲಿ ವಿಧಾನಪರಿಷತ್ ಸದಸ್ಯ ಕಿಶೋರ್ ಬೊಟ್ಯಾಡಿ ಏಕತಾ ಪ್ರತಿಜ್ಞಾವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ನಡಿಗೆಯ ಸಂಯೋಜಕರಾದ ಅರುಣ್ ಶೇಟ್, ನಂದನ್ ಮಲ್ಯ, ದಿನೇಶ್ ಅಮ್ಮೂರು, ಎನ್‌ಎಸ್‌ಎಸ್ ಅಧಿಕಾರಿಗಳಾದ ಅರುಣ್ ಪ್ರಕಾಶ್, ಚಂದ್ರಶೇಖರ, ಯುವಜನ ಒಕ್ಕೂಟದ ಅಧ್ಯಕ್ಷ ದಿನೇಶ್ ಸಾಲ್ಯಾನ್, ಮೈ ಭಾರತ್ ಅಧಿಕಾರಿ ಜಗದೀಶ್, ಸ್ಕೌಟ್ಸ್-ಗೈಡ್ಸ್ ಅಧಿಕಾರಿ ಸುನಿತಾ, ಉದ್ಯಮಿ ಸೀತಾರಾಮ ರೈ ಕೆದಂಬಾಡಿ ಗುತ್ತು, ಬಿಜೆಪಿ ಮುಖಂಡರಾದ ಯುವರಾಜ್ ಪೆರಿಯತ್ತೋಡಿ, ಸಂತೋಷ್ ರೈ ಕೈಕಾರ, ವಿರೂಪಾಕ್ಷ ಭಟ್, ನಾಗೇಶ್ ಟಿ.ಎಸ್., ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ಟಿ.ಕೆ, ಸಂಯೋಜಕ ಶ್ರೀಕಾಂತ್ ಪೂಜಾರಿ ಬಿರಾವು ಸೇರಿದಂತೆ ವಿವಿಧ ಶಾಲಾ-ಕಾಲೇಜುಗಳ ಎನ್‌ಎಸ್‌ಎಸ್, ಎನ್‌ಸಿಸಿ, ರೆಡ್‌ಕ್ರಾಸ್, ಸ್ಕೌಟ್ಸ್-ಗೈಡ್ಸ್, ರೋವರ್ಸ್-ರೇಂಜರ್ಸ್ ವಿದ್ಯಾರ್ಥಿಗಳು ಹಾಗೂ ಸಂಘ ಸಂಸ್ಥೆಗಳ ಸದಸ್ಯರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!