
ಬೆಂಗಳೂರು: ರಸ್ತೆ ಬದಿಯಲ್ಲಿ ಮರಗಳನ್ನು ನೆಡುತ್ತಲೇ ಖ್ಯಾತಿಯಾಗಿದ್ದ ಸಾಲುಮರದ ತಿಮಕ್ಕ ಕೊನೆಯುಸಿರೆಳೆದಿದ್ದಾರೆ.
ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ 1911 ಜೂನ್ 30ರಂದು ಜನಿಸಿದ್ದ ಅವರು, ವೃಕ್ಷಮಾತೆ ಎಂದೇ ಪ್ರಸಿದ್ಧಿ ಪಡೆದಿದ್ದರು. ಮರ, ಗಿಡಗಳನ್ನು ತಮ್ಮ ಮಕ್ಕಳಂತೆಯೇ ಪ್ರೀತಿಸುತ್ತಿದ್ದರು. ತಿಮ್ಮಕ್ಕ ಅವರಿಗೆ 1995ರಲ್ಲಿ ರಾಷ್ಟ್ರೀಯ ಪೌರ ಪ್ರಶಸ್ತಿ, 1997ರಲ್ಲಿ ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ, 2019ರಲ್ಲಿ ಪದ್ಮಶ್ರೀ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಹಾಗೂ ನಾಡೋಜ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.






