
ಪುತ್ತೂರು: ಐತಿಹಾಸಿಕ ಪುತ್ತೂರು ಕೋಟಿ–ಚೆನ್ನಯ ಜೋಡುಕರೆ ಕಂಬಳದ 33ನೇ ವರ್ಷದ ಪೂರ್ವಭಾವಿ ಸಭೆ ನವೆಂಬರ್ 17ರಂದು ಸಂಜೆ 4 ಗಂಟೆಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಜರುಗಲಿದೆ.
ಕೋಟಿ–ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಶಾಸಕ ಅಶೋಕ್ ಕುಮಾರ್ ರೈ ಹಾಗೂ ಮಾಜಿ ಶಾಸಕಿ ಶಂಥಕುಂತಳಾ ಟಿ. ಶೆಟ್ಟಿ ಅವರು ವಿಶೇಷ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಸಭೆಗೆ ಕಂಬಳ ಸಮಿತಿಯ ಎಲ್ಲ ಸದಸ್ಯರು ತಪ್ಪದೆ ಹಾಜರಾಗಿ, ತಮ್ಮ ಸಲಹೆ–ಸೂಚನೆಗಳನ್ನು ನೀಡಬೇಕೆಂದು ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ ತಿಳಿಸಿದ್ದಾರೆ.






