ಪುತ್ತೂರು: ನಗರದ ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀಧರ್ ನಾಯಕ್ (54) ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ನವೆಂಬರ್ 16ರಂದು ನಿಧನರಾದರು.
ಮೂಲತಃ ಕಾಸರಗೋಡು ಜಿಲ್ಲೆ ಮಧೂರು ನಿವಾಸಿಯಾಗಿರುವ ಅವರು ಕಳೆದ ಹಲವು ವರ್ಷಗಳಿನಿಂದ ಪುತ್ತೂರು ಕಬಕದಲ್ಲಿ ವಾಸವಿದ್ದರು. ಇತಿಹಾಸ ವಿಭಾಗದ ಉಪನ್ಯಾಸಕರಾಗಿದ್ದ ಇವರು, ವಿ.ಜಿ. ಭಟ್ ಅವರ ನಿವೃತ್ತಿಯ ನಂತರ ಕಾಲೇಜಿನ ಪ್ರಾಂಶುಪಾಲರಾಗಿ ಅಧಿಕಾರ ವಹಿಸಿಕೊಂಡಿದ್ದರು.
ಮೃತರು ಪತ್ನಿ ಮತ್ತು ಮಗನನ್ನು ಅಗಲಿದ್ದಾರೆ.














