
ಮೂಡಬಿದ್ರೆ:ಖಚಿತ ಮಾಹಿತಿಯ ಆಧಾರದ ಮೇಲೆ ಮೂಡಬಿದ್ರೆ ಪೊಲೀಸರು ಅಕ್ರಮ ಜಾನುವಾರು ಸಾಗಾಟ ಪ್ರಕರಣವನ್ನು ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ದಿನಾಂಕ 15-10-2025ರಂದು ಸಂಜೆ 5 ಗಂಟೆ ಸುಮಾರಿಗೆ ಮೂಡಬಿದ್ರೆ ತಾಲೂಕು ಹೊಸ್ಮಾರು–ನೆಲ್ಲಿಕಾರು ಕಡೆ ಟಾಟಾ ಎಸಿ ಕಂಟೈನರ್ ವಾಹನದಲ್ಲಿ ಮೂರು ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ವರದಿ ದೊರೆತ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ ಆರೋಪಿಗಳಾದ ಮನ್ಸೂರ್ ಅದ್ಯಪಾಡಿ @ ಮೊಹಮ್ಮದ್ ಮನ್ಸೂರ್, ಮೊಹಮ್ಮದ್ ಅಶ್ವದ್ ಹಾಗೂ ಅಬ್ದುಲ್ ಮೊಹಮ್ಮದ್ ನಿಶಾಮ್ ಅವರನ್ನು ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 178/2025ರಂತೆ ಕಲಂ 111 BNS, ಪ್ರಾಣಿ ಹಿಂಸಾ ಪ್ರತಿಬಂಧಕ ಕಾಯ್ದೆಯ ಕಲಂ 11(1)(ಡಿ) ಹಾಗೂ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಆಧ್ಯಾದೇಶ ಕಾಯ್ದೆಯ ಕಲಂ 4, 5, 7, 12ರಂತೆ ಪ್ರಕರಣ ದಾಖಲಿಸಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ:
1ನೇ ಆರೋಪಿ ಮನ್ಸೂರ್ ಅದ್ಯಪಾಡಿ ವಿರುದ್ಧ ವಿವಿಧ ಠಾಣೆಗಳಲ್ಲಿ ಈಗಾಗಲೇ 29 ಪ್ರಕರಣಗಳು ದಾಖಲಾಗಿದ್ದು, ಇದು 30ನೇ ಪ್ರಕರಣ.
2ನೇ ಆರೋಪಿ ಮೊಹಮ್ಮದ್ ಅಶ್ವದ್ ವಿರುದ್ಧ ಉಳ್ಳಾಲದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯಡಿ ಒಂದು ಪ್ರಕರಣ ದಾಖಲಾಗಿದ್ದು, ಇದು 2ನೇ ಪ್ರಕರಣ.
3ನೇ ಆರೋಪಿ ಅಬ್ದುಲ್ ಮೊಹಮ್ಮದ್ ನಿಶಾಮ್ ವಿರುದ್ಧ ಇದು ಮೊದಲ ಪ್ರಕರಣ.
ಆರೋಪಿಗಳ ವಿರುದ್ಧ ಸಂಘಟಿತ ಅಪರಾಧ ಪ್ರಕರಣ ದಾಖಲಿಸಿರುವ ಪೊಲೀಸರು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂದನಕ್ಕೆ ಒಪ್ಪಿಸಿದೆ.






