
ಮುಂಡೂರು ಗ್ರಾಮದ ಕಡ್ಯ ನಿವಾಸಿ ವಸಂತ ಗೌಡ ಹಾಗೂ ನೆಲ್ಲಿಕಟ್ಟೆಯ ರಾಜೇಶ್ ಅವರಿಗೆ ವೈದ್ಯಕೀಯ ಚಿಕಿತ್ಸೆಗೆ ಅಗತ್ಯವಿರುವ ಆರ್ಥಿಕ ಸಹಕಾರವನ್ನು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಹಿಂದುವಿ ಕಚೇರಿಯಲ್ಲಿ ಹಸ್ತಾಂತರಿಸಲಾಯಿತು.
ಸಹಾಯ ಹಸ್ತಾಂತರ ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷ ಶ್ರೀರಾಮ ಭಟ್ ಪಾತಾಲ, ಪ್ರಧಾನ ಕಾರ್ಯದರ್ಶಿ ಪ್ರೇಮರಾಜ್ ಅರ್ಲಪದವು, ಕೋಶಾಧಿಕಾರಿ ರೂಪೇಶ್ ನಾಯ್ಕ್, ಬಿಜೆಪಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ತೆಂಕಿಲ, ಟೌನ್ ಬ್ಯಾಂಕ್ ನಿರ್ದೇಶಕ ರಾಜು ಶೆಟ್ಟಿ, ಮಹೇಂದ್ರ ವರ್ಮ, ರವಿಕುಮಾರ್ ರೈ, ವೆಂಕಟರಮಣ ಕಡಬ, ಸುಜಿತ್ ಕಜೆ ಮತ್ತು ಉಮೇಶ್ ಗೌಡ ಉಪಸ್ಥಿತರಿದ್ದರು.
ಟ್ರಸ್ಟ್‌ನ ವತಿಯಿಂದ ಸಮಾಜಮುಖಿ ಸೇವಾ ಚಟುವಟಿಕೆಗಳನ್ನು ಮುಂದುವರಿಸುವ ವಿಶ್ವಾಸವನ್ನು ಸಂಚಾಲಕರು ಈ ಸಂದರ್ಭದಲ್ಲಿ ವ್ಯಕ್ತಪಡಿಸಿದರು.






