
ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ಕಮ್ಮಾಡಿ ಮರದ ಮಿಲ್ ಬಳಿಯ ವೀಣಾ ಎಂಬವರ ಬಾಬ್ತು ಬಾಡಿಗೆ ಕೋಣೆಯಲ್ಲಿ ನಿಷೇಧಿತ ಮಾದಕವಸ್ತು MDMA ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ನ.15ರಂದು ಬಂದ ಖಚಿತ ಮಾಹಿತಿಯ ಮೇರೆಗೆ ಪುತ್ತೂರು ನಗರ ಠಾಣೆಯ ಪಿಎಸ್‌ಐ ಜನಾರ್ಧನ ಕೆ.ಎಂ ನೇತೃತ್ವದ ಪೊಲೀಸರು ದಾಳಿ ನಡೆಸಿದ್ದು, ಆರೋಪಿ ತನ್ನ ಬಳಿ 14 ಗ್ರಾಂ MDMA ಇಟ್ಟುಕೊಂಡು ಮಾರಾಟಕ್ಕೆ ಯತ್ನಿಸುತ್ತಿದ್ದುದು ಪತ್ತೆಯಾಗಿದೆ.
ಬಂಧಿತನನ್ನು ಪುತ್ತೂರು ಕಬಕದ ನಿವಾಸಿ ಮಹಮ್ಮದ್ ಮುಸ್ತಫಾ (36) ಎಂದು ಗುರುತಿಸಲಾಗಿದೆ. ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ 109/2025, ಕಲಂ 8(C), 22(b) NDPS ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ.
ಹಿಂದಿನ ಪ್ರಕರಣಗಳೂ ದಾಖಲೆ
ಆರೋಪಿ ಮಹಮ್ಮದ್ ಮುಸ್ತಪಾ ವಿರುದ್ಧ ಈಗಾಗಲೇ ಹಲವು ಪ್ರಕರಣಗಳು ದಾಖಲಾಗಿದ್ದು—
ಪುತ್ತೂರು ನಗರ ಠಾಣೆಯ ಅ.ಕ್ರ 141/2015ರ ಪೋಕ್ಸೊ ಪ್ರಕರಣದಲ್ಲಿ ಮೂರು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
ಅ.ಕ್ರ 48/2024 ಮತ್ತು 108/2024ರಲ್ಲಿ ಮಾದಕವಸ್ತು ಮಾರಾಟ ಸಂಬಂಧಿತ ಪ್ರಕರಣಗಳು ದಾಖಲಾಗಿವೆ.
ಪೊಲೀಸರು ಆರೋಪಿಯನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.






