ಸುಳ್ಯ: ಜ್ಯೂಸ್ ಬಾಟಲಿ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ದೇವರಕೊಲ್ಲಿ ಫಾಲ್ಸ್ ಬಳಿ ಪಲ್ಟಿಯಾದ ಘಟನೆ ನಡೆದಿದೆ.

ಮಡಿಕೇರಿಯಿಂದ ಸುಳ್ಯದ ಕಡೆಗೆ ಸಂಚರಿಸುತ್ತಿದ್ದ ಲಾರಿ ದೇವರಕೊಲ್ಲಿ ಫಾಲ್ಸ್ ಬಳಿ ಬರುತ್ತಿದ್ದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ. ಅಪಘಾತದ ಸಂದರ್ಭ ಲಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ತಕ್ಷಣ ಮಡಿಕೇರಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಕೈಗೊಂಡಿದ್ದಾರೆ.

ಅಪಘಾತದ ವೇಳೆ ಲಾರಿ ಚಾಲಕ ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಘಟನೆ ಸ್ಥಳದಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!