
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಮಿಟ್ಲಕಟ್ಟೆ ಗ್ರಾಮದಲ್ಲಿ ನಡೆದಿದೆ.
ಪ್ರಿಯಾ (21) ಮೃತ ಯುವತಿ. ಯೋಗೇಶ್ ಗಾಯಾಳು ಯುವಕ. ದಾವಣೆಗೆ ನಿವಾಸಿಗಳಾಗಿದ್ದ ಇಬ್ಬರೂ ಕಾಲೇಜು ಮುಗಿಸಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಇಬ್ಬರು ದಾವಣಗೆರೆ ನಿವಾಸಿಗಳಾಗಿದ್ದು, ಕಾಲೇಜು ಮುಗಿಸಿ ಡಾಬಾವೊಂದಕ್ಕೆ ಸ್ನೇಹಿತರ ಜೊತೆ ಊಟಕ್ಕೆ ಹೋಗಿದ್ದರು. ಊಟ ಮುಗಿಸಿ ವಾಪಸ್ಸಾಗುವ ವೇಳೆ ಈ ಅಪಘಾತ ನಡೆದಿದೆ.
ಪ್ರಿಯಾ ಹಾಗೂ ಯೋಗೇಶ್ ನಡುವೆ ಡಾಬಾದಲ್ಲೇ ಗಲಾಟೆ ನಡೆದಿತ್ತು. ಇನ್ನೂ ಇಬ್ಬರ ಜಗಳ ಸಿಸಿ ಕ್ಯಾಮೆರಾದಲ್ಲಿ ಸಹ ಸೆರೆಯಾಗಿದೆ. ಜಗಳವಾಡಿ ಪ್ರಿಯಾ ಹಾಗೂ ಆಕೆಯ ಸ್ನೇಹಿತೆ ಒಂದು ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ, ಬುಲೆಟ್ ಬೈಕ್‌ನಲ್ಲಿ ಯುವತಿಯರನ್ನು ಹಿಂಬಾಲಿಸಿ ಹೊರಟ ಯೋಗೇಶ್, ನಡು ರಸ್ತೆಯಲ್ಲಿ ನಿಲ್ಲಿಸಿ ಪ್ರಿಯಾಳನ್ನು ತನ್ನ ಬೈಕ್‌ನಲ್ಲಿ ಕೂರಿಸಿಕೊಂಡು ಬಂದಿದ್ದ. ಆಗಲೂ ಜಗಳವಾಡುತ್ತಾ ಅಜಾಗರೂಕತೆಯಿಂದ ಬೈಕ್ ಚಲಾಯಿಸಿದ್ದು, ಅಪಘಾತ ಸಂಭವಿಸಿದೆ ಎನ್ನಲಾಗಿದೆ






