ಪುತ್ತೂರು :ಪುತ್ತಿಲ ಪರಿವಾರದ ನೇತೃತ್ವದಲ್ಲಿ ನಡೆಯಲಿರುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದ ಸಂಬಂಧ ಹಾಕಲಾಗಿದ್ದ ಬ್ಯಾನರ್‌ಗಳನ್ನು ಅಜ್ಞಾತ ವ್ಯಕ್ತಿಗಳು ಹರಿದು ಹಾಕಿರುವ ಘಟನೆ ಪುತ್ತೂರಿನಲ್ಲಿ ವರದಿಯಾಗಿದೆ.

ಬಲ್ನಾಡು ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಪಕ್ಕದಲ್ಲಿ ಪುತ್ತಿಲ ಪರಿವಾರದ ಕಾರ್ಯಕರ್ತರು ಅಳವಡಿಸಿದ್ದ ಬ್ಯಾನರ್‌ಗಳನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ ಎನ್ನಲಾಗಿದೆ. ಈ ಪ್ರದೇಶದಲ್ಲಿ ಹಾಕಲಾಗಿದ್ದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹಕ್ಕೆ ಸಂಬಂಧಿಸಿದ ಎರಡೂ ಬ್ಯಾನರ್‌ಗಳು ಹಾನಿಗೊಳಗಾಗಿವೆ ಎಂದು ತಿಳಿದುಬಂದಿದೆ.

ಈ ಘಟನೆಯ ಹಿನ್ನೆಲೆಯಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಪ್ರಮುಖರು ದೇವರ ಮೊರೆ ಹೋಗಿ ಸಾಮೂಹಿಕ ಪ್ರಾರ್ಥನೆ ಮಾಡುವ ತೀರ್ಮಾನ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

Join WhatsApp Group
error: Content is protected !!