ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶನಿವಾರ ರಾತ್ರಿ ವೇಳೆ ಗುಡುಗು ಸಹಿತ ಉತ್ತಮ ಮಳೆ ಸುರಿದಿದೆ. ಮಂಗಳೂರು, ಪುತ್ತೂರು, ಕುಕ್ಕೆ ಸುಬ್ರಹ್ಮಣ್ಯ, ಸುಳ್ಯ, ಕಡಬ, ಬಂಟ್ವಾಳ, ಬೆಳ್ತಂಗಡಿ ಸೇರಿದಂತೆ ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದೆ.

ವಾಯುಭಾರ ಕುಸಿತದಿಂದಾಗಿ ಈ ಮಳೆ ಸಂಭವಿಸಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಭಾನುವಾರವೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


Leave a Reply

Your email address will not be published. Required fields are marked *

Join WhatsApp Group
error: Content is protected !!