ಬಂಟ್ವಾಳ: ಬಂಟ್ವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಂತೂರು ಪ್ರದೇಶದಲ್ಲಿ ಗೂಡ್ಸ್ ವಾಹನದಲ್ಲಿ ಅಪಾಯಕಾರಿಯಾಗಿ ಸಾಮಗ್ರಿಗಳನ್ನು ಸಾಗಿಸುತ್ತಿದ್ದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಪ್ರಕರಣಕ್ಕೆ ಸಂಬಂಧಿಸಿ, ಸಂಚಾರ ಪೊಲೀಸರು ಸೂಕ್ತ ಕ್ರಮ ಕೈಗೊಂಡಿದ್ದಾರೆ.

ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದ ಸಂಬಂಧಿತ ವಾಹನ ಚಾಲಕರ ವಿರುದ್ಧ ನಿಯಮದನ್ವಯ ದಂಡ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂತಹ ಘಟನೆಗಳು ಮರುಕಳಿಸದಂತೆ ಜಿಲ್ಲಾವ್ಯಾಪ್ತಿಯ ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಈ ವೇಳೆ ವಾಹನ ಚಾಲಕರಿಗೆ ಸಂಚಾರ ನಿಯಮಗಳ ಪಾಲನೆ, ಸುರಕ್ಷಿತ ಚಾಲನೆ, ವಾಹನ ಚಾಲನೆಯ ವೇಳೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ನೀಡಲಾಗುವುದು ಎಂದು ಸಂಚಾರ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!