
ಬಂಟ್ವಾಳ: ಮಾಣಿ ಸಮೀಪದ ಕೊಡಾಜೆ ಐಕ್ಯ ವೇದಿಕೆಯ ನೂತನ ಅಧ್ಯಕ್ಷರಾಗಿ ಅಶ್ರಫ್ (ಭಾರತ್ ಕಾರ್ಸ್) ಆಯ್ಕೆಗೊಂಡಿದ್ದಾರೆ.
ವೇದಿಕೆಯ ಅಧ್ಯಕ್ಷ ಫಾರೂಕ್ ಗೋಳಿಕಟ್ಟೆ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು. ಗೌರವಾಧ್ಯಕ್ಷ ಲತೀಫ್ ನೇರಳಕಟ್ಟೆ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಡಿದರು. ಕೊಡಾಜೆ ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷ ಅಬ್ಬಾಸ್ ನೇರಳಕಟ್ಟೆ ನೂತನ ಪದಾಧಿಕಾರಿಗಳಿಗೆ ಶುಭಾಶಯ ಕೋರಿದರು.
ನೂತನ ಪದಾಧಿಕಾರಿಗಳಾಗಿ ಉಪಾಧ್ಯಕ್ಷರಾಗಿ ರಝಾಕ್ ಅನಂತಾಡಿ ಹಾಗೂ ಆದಂ ಎಸ್.ಎಂ.ಎಸ್., ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಅನಂತಾಡಿ, ಜೊತೆ ಕಾರ್ಯದರ್ಶಿಯಾಗಿ ಎಸ್.ಎಸ್. ಮಸೂದ್ ಕೊಡಾಜೆ, ಕೋಶಾಧಿಕಾರಿಯಾಗಿ ಎಸ್.ಎಸ್. ರಫೀಕ್ ಕೊಡಾಜೆ ಆಯ್ಕೆಯಾದರು.
ಗೌರವ ಸಲಹೆಗಾರರಾಗಿ ನಿಕಟಪೂರ್ವ ಅಧ್ಯಕ್ಷ ಫಾರೂಕ್ ಗೋಳಿಕಟ್ಟೆ, ಸೋಡ್ತಿ ಉಸ್ತುವಾರಿಯಾಗಿ ನಿಕಟಪೂರ್ವ ಕೋಶಾಧಿಕಾರಿ ರಿಯಾಝ್ ನೇರಳಕಟ್ಟೆಯನ್ನು ನೇಮಿಸಲಾಯಿತು. ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಮನ್ಸೂರ್ ನೇರಳಕಟ್ಟೆ, ಪತ್ರಿಕಾ ಕಾರ್ಯದರ್ಶಿಗಳಾಗಿ ನೌಫಲ್ ಕೊಡಾಜೆ ಹಾಗೂ ಮಜೀದ್ ಅನಂತಾಡಿ, ಕ್ರೀಡಾ ಕಾರ್ಯದರ್ಶಿಗಳಾಗಿ ರಫೀಕ್ ಪಂಥಡ್ಕ ಮತ್ತು ಫಾರೂಕ್ ಕೊಡಾಜೆ ಆಯ್ಕೆಯಾದರು.
ಆರೋಗ್ಯ ಕಾರ್ಯದರ್ಶಿಯಾಗಿ ಸಲೀಂ ಪರ್ಲೋಟ್, ಶೈಕ್ಷಣಿಕ ಕಾರ್ಯದರ್ಶಿಯಾಗಿ ಹಫೀಝ್ ನೇರಳಕಟ್ಟೆ ಹಾಗೂ ಸಾಮಾಜಿಕ ಕಾರ್ಯದರ್ಶಿಯಾಗಿ ಫಾರೂಕ್ ಪಂಥಡ್ಕರನ್ನು ನೇಮಕ ಮಾಡಲಾಯಿತು.
ಸಭೆಯಲ್ಲಿ ಕಾರ್ಯದರ್ಶಿ ಶರೀಫ್ ಅನಂತಾಡಿ ಸ್ವಾಗತಿಸಿ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರ ಮಂಡಿಸಿದರು. ಕೋಶಾಧಿಕಾರಿ ರಿಯಾಝ್ ನೇರಳಕಟ್ಟೆ ವಂದಿಸಿದರು.






