ಬಂಟ್ವಾಳ:ಪೂರ್ವಾನುಮತಿ ಪಡೆಯದೆ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಕರ್ಕಶವಾಗಿ ಧ್ವನಿವರ್ಧಕ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ನ.22, 2025ರಂದು ರಾತ್ರಿ ವೇಳೆ ಬಂಟ್ವಾಳದ ಭಂಡಾರಿಬೆಟ್ಟು ಪ್ರದೇಶದಲ್ಲಿ ಮದುವೆ ಕಾರ್ಯಕ್ರಮದ ಸಂದರ್ಭ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಶಬ್ದದಲ್ಲಿ ಡಿ.ಜೆ ಧ್ವನಿವರ್ಧಕ ಬಳಸುತ್ತಿರುವ ಬಗ್ಗೆ ಪೊಲೀಸರಿಗೆ ದೂರು ಬಂದಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದಾಗ ಯಾವುದೇ ಪೂರ್ವಾನುಮತಿ ಪಡೆಯದೇ ಕರ್ಕಶವಾಗಿ ಧ್ವನಿವರ್ಧಕ ಬಳಸಿರುವುದು ದೃಢಪಟ್ಟಿದೆ.

ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 135/2025ರಂತೆ ಕೆ.ಪಿ ಆಕ್ಟ್ ಕಲಂ 36, 37 ಹಾಗೂ 109 ಮತ್ತು ಧ್ವನಿ ಮಾಲಿನ್ಯ ನಿಯಂತ್ರಣ ಕಾಯ್ದೆ 2000ರ ಸೆಕ್ಷನ್ 5 ಮತ್ತು 6ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸರು ಸಾರ್ವಜನಿಕರಿಗೆ ಶಾಂತಿ ಕಾಪಾಡುವಂತೆ ಮತ್ತು ನಿಯಮ ಪಾಲನೆ ಕಡ್ಡಾಯ ಮಾಡುವಂತೆ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!